ಬೆಂಗಳೂರು:- ವಾಲ್ಮೀಕಿ, ಮುಡಾ ಹಗರಣದ ನಡುವೆ ಇಂದಿನಿಂದ ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದೆ. ಹಲವು ಹಗರಣಗಳು ಹೊರ ಬಂದಿರುವುದರಿಂದ ಕಾಂಗ್ರೆಸ್ ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ.
ಈ ಜಂಗೀಕುಸ್ತಿಯ ನಡುವೆ ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ ಆರಂಭವಾಗುತ್ತಿದೆ. ಜುಲೈ 26ರವರೆಗೆ 16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ನಡೆಯಲಿದೆ. ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ, ವಾಲ್ಮೀಕಿ ನಿಗಮದಲ್ಲಿನ 187 ಹಗರಣ ಆರೋಪ ಬಿಜೆಪಿಗೆ ಅಸ್ತ್ರವಾಗಿದೆ. ಇದೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಜಂಟಿ ಹೋರಾಟಕ್ಕೆ ಸಜ್ಜಾಗಿವೆ.
ವಿದ್ಯಾರ್ಥಿಗಳೇ ಗಮನಿಸಿ: ಇಂದು ಶಾಲೆ-ಕಾಲೇಜ್ಗೆ ರಜೆ, ಎಲ್ಲೆಲ್ಲಿ ಗೊತ್ತಾ!?
ಅಧಿವೇಶನದಲ್ಲಿ ಮುಡಾ ಸೈಟ್ ಹಂಚಿಕೆ, ವಾಲ್ಮೀಕಿ ಅಕ್ರಮವನ್ನೇ ಪ್ರಧಾನವಾಗಿ ಪ್ರಸ್ತಾಪಿಸಲು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಿರ್ಧರಿಸಿವೆ. ಈ 2 ವಿಷಯಗಳ ತಾರ್ಕಿಕ ಅಂತ್ಯಕ್ಕೆ ತಲುಪುವವರೆಗೂ ಹೋರಾಟ ಮುಂದಾಗಿವೆ. ಇದಲ್ಲದೆ ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಹಣ ಗ್ಯಾರಂಟಿಗೆ ಬಳಕೆ, ಬೆಲೆ ಏರಿಕೆ, ಡೆಂಘೀ ನಿರ್ಲಕ್ಷ್ಯ, ಕಾನೂನು ಸುವ್ಯವಸ್ಥೆ ವಿಷ್ಯಗಳನ್ನು ಸನ್ನಿವೇಶ ಆಧಾರಿತವಾಗಿ ಪ್ರಸ್ತಾಪಿಸಲು ನಿರ್ಧರಿಸಲಾಗಿದೆ. ಸದನದಲ್ಲಿ ಯಾವುದೇ ವಿಷಯಕ್ಕೆ ಆರಂಭದಲ್ಲೇ ಪ್ರತಿಭಟನೆ ಬೇಡ. ವಿಷಯಗಳನ್ನು ಪ್ರಸ್ತಾಪಿಸಿದ ಬಳಿಕವೇ ಕೊನೆಯಲ್ಲಿ ಪ್ರತಿಭಟನೆ ಮಾಡಲು ತಂತ್ರ ರೂಪಿಸಿವೆ.
ಬಿಜೆಪಿ ಸರ್ಕಾರದ ಅವಧಿಯ ಭ್ರಷ್ಟಾಚಾರದ ಆರೋಪಗಳನ್ನ ಮುಂದಿಟ್ಟುಕೊಂಡು ತಿರುಗೇಟು ನೀಡಲು ಸರ್ಕಾರ ಚಿಂತನೆ ನಡೆಸಿದೆ. ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಆರೋಪ, ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಶೇ 40 ಕಮಿಷನ್ ಆರೋಪ, ಕೊರೊನಾ ಕಾಲದ ಹಗರಣ, ಬಿಟ್ ಕಾಯಿನ್ ಹಗರಣ ಹಾಗೂ ದೇವರಾಜ ಅರಸು ಟ್ರಕ್ ಟರ್ಮಿನಲ್ನಲ್ಲಿ 47ಕೋಟಿ ರೂಪಾಯಿ ಹಗರಣದಲ್ಲಿ ಬಿಜೆಪಿಯ ಮಾಜಿ ಶಾಸಕ ವೀರಯ್ಯನನ್ನು ಬಂಧಿಸಲಾಗಿದೆ. ಈ ವಿಚಾರಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ತಿರುಗೇಟು ನೀಡುವ ಸಾಧ್ಯತೆ ಇದೆ.
ಈ ಮಧ್ಯೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಬಗ್ಗೆ ನಿಲುವಳಿ ಮಂಡಿಸಲು ವಿಪಕ್ಷ ಬಿಜೆಪಿ ಮುಂದಾಗಿದೆ. ವಿಧಾನಸಭೆ ಕಲಾಪದಲ್ಲಿ ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಮಂಡಲಿಸಲಿದೆ. ಬೆಳಗ್ಗೆ ಬಿಜೆಪಿ ನಾಯಕರು ಸ್ಪೀಕರ್ ಯು.ಟಿ.ಖಾದರ್ಗೆ ನಿಲುವಳಿ ನೋಟಿಸ್ ಸಲ್ಲಿಸಲಿದ್ದಾರೆ.
ಮತ್ತೊಂದೆಡೆ ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿರೋ ಶಾಸಕ ಬಸನಗೌಡ ದದ್ದಲ್, ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ನಾಪತ್ತೆಯಾಗಿದ್ದಾರೆ. ಇಂದಿನಿಂದ ಆರಂಭವಾಗುವ ಅಧಿವೇಶನಕ್ಕೆ ಬರುತ್ತಾರಾ ಎಂಬ ಅನುಮಾನ ಶುರುವಾಗಿದೆ