ಚಿತ್ರದುರ್ಗ: ಚಿತ್ರದುರ್ಗದ ತಳಕು ಹೈವೆ ಬ್ರೀಡ್ಜ್ ಸಮೀಪದಲ್ಲಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿತ್ರದುರ್ಗದ ತಳಕು ಹೈವೆ ಬ್ರೀಡ್ಜ್ ಸಮೀಪದಲ್ಲಿ ಅಪಘಾತ ಸಂಭವಿಸಿದೆ.
ಶ್ರೀಲಂಕಾ ವಿರುದ್ಧದ ಸರಣಿಗೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅಲಭ್ಯ..!
ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಬಳ್ಳಾರಿ ಮೂಲದ ಗೋಪಿನಾಥ್ (52), ಲಲಿತಮ್ಮ (47) ಮೃತ ದುರ್ದೈವಿಗಳು. ಬೆಂಗಳೂರಿನಲ್ಲಿ ಉಪನಯನ ಕಾರ್ಯಕ್ರಮ ಮುಗಿಸಿ, ಬಳ್ಳಾರಿಗೆ ತೆರಳುವ ವೇಳೆ ಅಪಘಾತ ನಡೆದಿದೆ. ನಿದ್ರೆಯ ಮಂಪರಿನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ.
ಘಟನೆಯಲ್ಲಿ ಶ್ರೇಯ, ಶ್ರೀನಿವಾಸ್ ಹಾಗೂ ಚಾಲಕ ಸುರೇಶ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ರವಾನಿಸಲಾಗಿದೆ. ಸ್ಥಳಕ್ಕೆ ತಳಕು ಪಿಎಸ್ಐ ಲೋಕೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.