ಬೆಂಗಳೂರು: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು,-ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಡಿವೈಡರ್ ದಾಟಿ ಮೈಸೂರು ರಸ್ತೆಯತ್ತ ತೆರಳುತ್ತಿದ್ದ XUV 700 ಕಾರಿಗೆ ಡಿಕ್ಕಿಹೊಡೆದಿದೆ. ಪರಿಣಾಮ ಸ್ಕಾರ್ಪಿಯೋನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ನಂಜೇಶ್(35),ವಿನೋದ್ (34)ಕಮಾರ್(35) ಮೃತ ದುರ್ದೈವಿಗಳು.
ಹೊಸೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಸ್ಕಾರ್ಪಿಯೋ ಕಾರು ಮಳೆಯಿಂದಾಗಿ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಹೊಡೆದಿದೆ., ಬಳಿಕ ಡಿವೈಡರ್ ದಾಟಿ ಆಕಡೆ ರಸ್ತೆಯಲ್ಲಿ ಚಲಿಸುತ್ತಿದ್ದ XUV 700 ಗುದ್ದಿದೆ. ಎಕ್ಸ್ ಯು ವಿ ಕಾರಿನಲ್ಲಿದ್ದ ಶಿವರಾಮಕೃಷ್ಣ(41),ಪ್ರಸನ್ನ(40) ಇಬ್ಬರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತ ಮೂವರು ಸ್ಕಾರ್ಪಿಯೋ ಕಾರಿನಲ್ಲಿ ಗೋವಾಗೆ ತೆರಳಲು ಬೆಂಗಳೂರಿನತ್ತ ಆಗಮಿಸಿದ್ದರು. ಈ ವೇಳೆ ಮಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.