ನವದೆಹಲಿ:-ಭೂಪಾಲ್ನ ಅವಧಪುರಿಯಲ್ಲಿ ಮಹಿಳೆಯೊಬ್ಬಳ ಮೇಲೆ ಆಕೆಯ ಮಗನ ಸ್ನೇಹಿತ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಜರುಗಿದೆ.
ಗೆಳೆಯನ ತಾಯಿಯ ಮೇಲೆಯೇ ಯುವಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವನ್ನು ಆಕೆ ವಿರೋಧಿಸಿದ್ದಕ್ಕಾಗಿ ಆಕೆಯ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಆಕೆಯನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ
ಆರೋಪಿಯು ಮಹಿಳೆಯ ಮೇಲೆ ದೌರ್ಜನ್ಯವೆಸಗಿದ್ದಾನೆ. ಅತ್ಯಾಚಾರದ ವಿಷಯವನ್ನು ಯಾರಿಗಾದರೂ ಹೇಳಿದರೆ ಆಕೆಯ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಆರೋಪಿ ಆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮರುದಿನ ಮಹಿಳೆ ಪೊಲೀಸರಿಗೆ ದೂರು ನೀಡಿ ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಅತ್ಯಾಚಾರಕ್ಕೊಳಗಾದ ಮಹಿಳೆಯ ಮಗನ ಸ್ನೇಹಿತನಾಗಿರುವ ಆರೋಪಿಯು ಅತ್ಯಾಚಾರದ ಪ್ರಯತ್ನವನ್ನು ವಿರೋಧಿಸಿದರೆ ತನ್ನ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಅತ್ಯಾಚಾರ ಘಟನೆಯು ಜುಲೈ 12ರಂದು ಭೋಪಾಲ್ನ ಅವಧಪುರಿ ಪ್ರದೇಶದಲ್ಲಿ ಸಂಭವಿಸಿದೆ.