ಚಿಕ್ಕಮಗಳೂರು:- ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣ ಧರೆಗುರುಳಿದೆ. ನೋಡ ನೋಡುತ್ತಿದ್ದಂತೆ ಇಡೀ ಬಸ್ ನಿಲ್ದಾಣವೇ ಧ್ವಂಸವಾಗಿದೆ.
ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಿ ಭಾರಿ ಅವಘಡ ಸಂಭವಿಸಿದ್ದು, ಬಸ್ ನಿಲ್ದಾಣದ ಸುತ್ತಮುತ್ತ ಗೋಡೆಗಳು ನಾಶವಾಗಿವೆ. ಭಾರಿ ಮಳೆ ಹಿನ್ನಲೆ ಕೊಟ್ಟಿಗೆಹಾರದಲ್ಲಿ ವಿದ್ಯುತ್ ಸಂಪರ್ಕವೂ ಸ್ಥಗಿತವಾಗಿದ್ದು, ಕತ್ತಲೆಯಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡಿದರು. ಗೋಡೆಗಳು ಬಿದ್ದ ಶಬ್ದಕ್ಕೆ ಸ್ಥಳೀಯರು ಬೆಚ್ಚಿಬಿದ್ದರು.
Good News: 7ನೇ ವೇತನ ಆಯೋಗ ಜಾರಿ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಪಟ್ಟಿ!
ಭಾರಿ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿದ್ದು, ಶೃಂಗೇರಿ ಪಟ್ಟಣದ ಗಾಂಧಿ ಮೈದಾನಕ್ಕೆ ನೀರು ನುಗ್ಗಿದೆ. ನದಿ ತಟದಲ್ಲಿದ್ದ ಅಂಗಡಿ ಮುಂಗಟ್ಟು, ಪಾರ್ಕಿಂಗ್ ಜಾಗ ಮುಳುಗಡೆಯಾಗಿವೆ. ಪಟ್ಟಣದ ಯಾತ್ರಿ ನಿವಾಸದ ವರೆಗೂ ನದಿಯ ನೀರು ನುಗ್ಗಿದೆ. ನದಿ ಪಕ್ಕದ ಪ್ಯಾರಲಲ್ ರಸ್ತೆಯೂ ಸಂಪೂರ್ಣ ಮುಳುಗಡೆಯಾಗಿದ್ದು, ಶೃಂಗೇರಿಯಲ್ಲಿ ನದಿ ಪಾತ್ರದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ
ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಮಲೆನಾಡಿನ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ