ಬೆಂಗಳೂರು: ರಾಜ್ಯದಲ್ಲಿ 1.73 ಲಕ್ಷ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರ ವಿಲೇವಾರಿ ಮಾಡಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ವಿಧಾನ ಪರಿಷತ್ಗೆ ಮಾಹಿತಿ ನೀಡಿದ್ದಾರೆ. ಬಿಜೆಪಿಯ ಪ್ರತಾಪ ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು,
“2.95 ಲಕ್ಷ ಪಡಿತರ ಚೀಟಿಗಾಗಿ ಅರ್ಜಿ ಬಂದಿವೆ. ಇದರಲ್ಲಿ 2.36 ಲಕ್ಷ ಮಂದಿ ಅರ್ಹರಿದ್ದಾರೆ. ಬಿಪಿಎಲ್ ಕಾರ್ಡ್ಗೆ ಅರ್ಜಿ ಹಾಕಿದ ಒಂದು ವಾರದೊಳಗೆ ಅಂಥವರಿಗೆ ಆರೋಗ್ಯ ಸೇವೆ ಸಿಗುವಂತಹ ವ್ಯವಸ್ಥೆ ಮಾಡಲಾಗಿದೆ,” ಎಂದರು.
Bitter Gourd: ಎಚ್ಚರ..! ಹಾಗಲಕಾಯಿ ತಿಂದ ನಂತರ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತಿನ್ನಬೇಡಿ!
ಆರೋಗ್ಯ ಸಂಬಂಧಿ ಚಿಕಿತ್ಸೆ ಪಡೆಯಲು ಪಡಿತರ ಕಾರ್ಡ್ ವಿತರಿಸಲು ಕಾಲಮಿತಿ ಇಲ್ಲ. ವಾರದಲ್ಲಿ ಕಾರ್ಡ್ ವಿತರಿಸಲಾಗುತ್ತದೆ. ಈವರೆಗೂ ಎಪಿಎಲ್ ಮತ್ತು ಬಿಪಿಎಲ್ ಸೇರಿ 4 ಕೋಟಿ ಜನರ ಮೀರಿ ಅಧಿಕ ಕಾರ್ಡ್ಗಳ ವಿತರಣೆ ಮಾಡಿದ್ದೇವೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾರೇ ಅರ್ಜಿ ಸಲ್ಲಿಸುತ್ತಿದ್ದಂತೆ ಕೂಡಲೇ ಕಾರ್ಡ್ ಕೊಡಲು ಕ್ರಮ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.