ಬೆಂಗಳೂರು:- ಕರ್ನಾಟಕದಲ್ಲಿ ನಾಳೆಯಿಂದ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ (ಜುಲೈ 17 ಮತ್ತು 18ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಸಹ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 19ರಿಂದ ಕರಾವಳಿ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ
ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆಯುತ್ತಿದ್ದು, ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಜುಲೈ 17 ಮತ್ತು 18ರಂದು ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.