ಬೆಂಗಳೂರು:- 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ 3.36 ಕಿಮೀ ಉದ್ದದ ಡಬ್ಬಲ್ ಡೆಕ್ಕರ್ ಫ್ಲೈ ಓವರ್ ಅನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಲೋಕಾರ್ಪಣೆಗೊಳಿಸಿದರು.
ಬಳಿಕ ಖುದ್ದು ಡಿಕೆ ಶಿವಕುಮಾರ್ ಅವರೇ ಫ್ಲೈಓವರ್ ರಸ್ತೆಯಲ್ಲಿ ಕಾರು ಓಡಿಸುವ ಮೂಲಕ ಪ್ರಾಯೋಗಿಕ ವಾಹನ ಸಂಚಾರಕ್ಕೆ ಚಾಲನೆ ನೀಡಿದರು. ಕಾರಿನಲ್ಲಿ ಡಿಕೆಶಿ ಜೊತೆ ಸಚಿವ ರಾಮಲಿಂಗಾ ರೆಡ್ಡಿ ಅವರೂ ಕುಳಿತಿದ್ದರು.
ಇನ್ನು ಈ ಡಬ್ಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಕಾರು ಓಡಿಸುವ ವಿಡಿಯೋವನ್ನು ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಆದ್ರೆ, ಕಾರು ಚಲಾಯಿಸುವ ಖುಷಿಯಲ್ಲಿ ಡಿಕೆ ಶಿವಕುಮಾರ್ ಸೀಟ್ ಬೆಲ್ಟ್ ಹಾಕುವುದನ್ನೇ ಮರೆತುಬಿಟ್ಟಿದ್ದಾರೆ. ಇದಕ್ಕೆ ನೆಟ್ಟಿಗರು ಫನ್ನಿಯಾಗಿ ಕಾಮೆಂಟ್ ಹಾಕಿದ್ದಾರೆ. ಕಾರಿನ ಸೀಟ್ ಬೆಲ್ಟ್ ಹಾಕದಿರುವುದಕ್ಕೆ ಡಿಕೆ ಶಿವಕುಮಾರ್ ಕಾಲೆಳೆದಿರುವ ನೆಟ್ಟಿಗರೊಬ್ಬರು, ಸೀಟ್ ಬೆಲ್ಟ್ ನಮಗೆ ಮಾತ್ರ ಕಡ್ಡಾಯನ? ನಿಮನ್ನ ಪ್ರಶ್ನೆ ಮಾಡೋಕೆ ಆಗುತ್ತಾ? ಕುತೂಹಲಕ್ಕೆ ಕೇಳಿದ್ವಿ ಅಷ್ಟೇ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.