ಬೆಂಗಳೂರು:- ವಾಲ್ಮೀಕಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಕಸ್ಟಡಿ ಇಂದು ಅಂತ್ಯವಾಗುತ್ತಿದ್ದು, ಅವರನ್ನು ಮತ್ತೆ ಕೋರ್ಟ್ ಮುಂದೆ ಇಡಿ ಹಾಜರ್ ಪಡಿಸಲಿದೆ.
ಫರ್ನಿಚರ್ ಅಂಗಡಿಯಲ್ಲಿ ಅಗ್ನಿ ಅವಘಡ: ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು!
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಇಂದು ಮಧ್ಯಾಹ್ನ 2 ಗಂಟೆಗೆ ನಾಗೇಂದ್ರ ಅವರನ್ನು ಇಡಿ ಹಾಜರು ಪಡಿಸಲಿದೆ. ಮತ್ತೆ ಮೂರರಿಂದ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ
ನಾಗೇಂದ್ರರವರ ಇಬ್ಬರು ಪಿಎಗಳು, ನಾಗೇಂದ್ರರ ಪತ್ನಿ ಎಲ್ಲರ ಹೇಳಿಕೆಯನ್ನು ಪಡೆದಿರುವ ಇಡಿ, ಇನ್ನಷ್ಟು ವಿಚಾರಗಳನ್ನು ಹೊರತೆಗೆಯುವ ಅಗತ್ಯದಲ್ಲಿ ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಿದೆ
ನಿನ್ನೆ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ತೆಗೆದುಕೊಂಡು ಇಡಿ ವಿಚಾರಣೆ ಮಾಡಿತ್ತು. ಅಧಿಕಾರಿಗಳು 7ರಿಂದ 8 ಗಂಟೆಗಳ ಕಾಲ ಸುದೀರ್ಘ ವಿಚಾರಣೆ ಮಾಡಿದ್ದರು. ಸಾಕಷ್ಟು ವಿಚಾರಗಳನ್ನು ಹೊರ ತೆಗೆದಿದ್ದಾರೆ. ಪತಿ ಪತ್ನಿಯನ್ನು ಮುಖಾಮುಖಿ ಕೂರಿಸಿ ಪ್ರಶ್ನೆ ಮಾಡಲಾಗಿದೆ. ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ