ಬೆಂಗಳೂರು: ಗಾಂಜಾ ಮತ್ತಿನಲ್ಲಿ ಶಾಲಾ ಬಾಲಕಿಯರಿಗೆ ಪುಂಡರ ಗುಂಪೊಂದು ಕಿರುಕುಳ ನೀಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಎಚ್ಎಎಲ್ ಬಳಿಯಿರುವ ಇರುವ ಖಾಸಗಿ ಶಾಲೆಯ ಮಕ್ಕಳ ಜೊತೆ ಅಸಭ್ಯ ವರ್ತನೆ ತೋರಲಾಗಿದೆ. ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರನ್ನು ಫುಟ್ಪಾತ್ ಮೇಲೆ ಹತ್ತಿಸಿದ್ದರು. ಬಳಿಕ ಮಕ್ಕಳಿಗೆ ಹೆದರಿಸಲು ಯತ್ನಿಸಿದ್ದ. ಈ ವೇಳೆ ಕಾರಿನಲ್ಲಿದ್ದ ಒಬ್ಬ ನಶೆಯಲ್ಲಿ ತೂರಾಡಿ ಕೆಳಗೆ ಬಿದ್ದಿದ್ದಾನೆ. ಅಲ್ಲದೆ ಮಕ್ಕಳ ಮುಂದೆಯೇ ಅಸಭ್ಯ ವರ್ತನೆ ತೋರಿದ್ದಾನೆ. ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಅವರ ಮೇಲೆ ದರ್ಪ ತೋರಿದ್ದಾರೆ. ಪ್ರಶ್ನೆ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದರು. ತಕ್ಷಣ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೊಯ್ಸಳ ವಾಹನ ಬರುವಷ್ಟರಲ್ಲಿ ಕಾರಿನಲ್ಲಿದ್ದವು ಪರಾರಿಯಾಗಿದ್ದಾರೆ. ಗಾಂಜಾ ನಶೆ ಹಾಗು ಕುಡಿತದ ಅಮಲಿನಲ್ಲಿ ಕೃತ್ಯ ಎಸಗಿರುವ ಸಾಧ್ಯತೆ ಎಂದು ಸ್ಥಳೀಯರ ಶಂಕಿಸಿದ್ದಾರೆ.