ಬೆಂಗಳೂರು:- ದಾವಣಗೆರೆ ಲೋಕಸಭಾ ಕಾಂಗ್ರೆಸ್ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮತ್ತು ಹಾಸನ ಕಾಂಗ್ರೆಸ್ ಸಂಸದ ಶ್ರೇಯಸ್ ಪಾಟೀಲ್ ಆಯ್ಕೆ ಅಸಿಂಧುಗೊಳಿಸಬೇಕೆಂದು ಪರಾಜಿತ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಲಾಗಿದೆ.
ಕನ್ನಡಿಗರಿಗೆ ಮೀಸಲಾತಿ ಕೊಡಲು ಸರ್ಕಾರ ಹೆದರಿದ್ರೆ ದಂಗೆ ಏಳ್ತೀವಿ ಹುಷಾರ್: ಕರವೇ ನಾರಾಯಣಗೌಡ!
ಕರ್ನಾಟಕ ಕಾಂಗ್ರೆಸ್ನ ಇಬ್ಬರು ಸಂಸದರ ಆಯ್ಕೆ ಅಸಿಂಧುಗೊಳಿಸಬೇಕೆಂದು ಕೋರಿ ಬಿಜೆಪಿ ನಾಯಕರು ಕೋರ್ಟ್ ಮೆಟ್ಟಿಲೇರಿದ್ದಾರೆ. ದಾವಣಗೆರೆ ಲೋಕಸಭಾ ಕಾಂಗ್ರೆಸ್ ಸಂಸದೆಯಾಗಿ ಆಯ್ಕೆಯಾಗಿರುವ ಡಾ.ಪ್ರಭಾ ಮಲ್ಲಿಕಾರ್ಜುನ ಆಯ್ಕೆ ಅಸಿಂಧು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಜಿ.ಎಸ್.ಗಾಯತ್ರಿ ಸಿದ್ದೇಶ್ವರ ಅವರು ಹೈಕೋರ್ಟ್ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಡಾ.ಪ್ರಭಾ ಮಲ್ಲಿಕಾರ್ಜುನ ಅವರು ಚುನಾವಣೆ ವೇಳೆ ಮಹಿಳೆಯರಿಗೆ 1 ಲಕ್ಷ ರೂಪಾಯಿ ಗ್ಯಾರಂಟಿ ಕಾರ್ಡ್ ವಿತರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಕಾಂಗ್ರೆಸ್ ಶ್ರೇಯಸ್ ಪಾಟೀಲ್ ವಿರುದ್ಧ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್ ಎನ್ನುವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಶ್ರೇಯಸ್ ಪಾಟೀಲ್ ಅವರ ನಾಮಪತ್ರ ಕ್ರಮಬದ್ಧವಾಗಿಲ್ಲವೆಂದು ಘೋಷಿಸುವಂತೆ ಹೈಕೋರ್ಟ್ಗೆ ಅರ್ಜಿ ಹಾಕಿದ್ದಾರೆ. ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿಲ್. ಪ್ರಮಾಣ ಪತ್ರದಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಸಂಸದರಾಗಿ ಆಯ್ಕೆಯಾಗಿರುವ ಶ್ರೇಯಸ್ ಎಂ. ಪಟೇಲ್ ಆಯ್ಕೆ ಅಸಿಂಧುಗೊಳಿಸುವಂತೆ ಮನವಿ ಮಾಡಿದ್ದಾರೆ.