ಭಾರೀ ಮಳೆ ಹಿನ್ನೆಲೆ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶಾಲೆ, ಕಾಲೇಜ್ಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾಸನ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇಂದೂ ಅಂಗನವಾಡಿ, ಶಾಲೆ, ಕಾಲೇಜ್ಗೆ ರಜೆ ಘೋಷಣೆ ಮಾಡಲಾಗಿದೆ.
Siddaramaiah: ಆ ಮೂವರಿಂದ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ: CM ಸಿದ್ದರಾಮಯ್ಯ!
ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದೂ ಸಹ ರಜೆ ಮುಂದುವರೆಸಲಾಗಿದೆ. ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ದಾಂಡೇಲಿ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 19 ರಂದು ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆ ಮುಂದುವರಿದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಐದು ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ಹಾಗೂ ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಡಿಸಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ
ಶಿವಮೊಗ್ಗದಲ್ಲೂ ಮಳೆ ಮುಂದುವರೆದಿದೆ. ಇಂದೂತ ಭಾರೀ ಮಳೆಯಾಗ ಮುನ್ಸೂಚನೆ ಸಿಕ್ಕಿದೆ. ಅದರಲ್ಲೂ ಹೊಸನಗರ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ ಶುಕ್ರವಾರ ಹೊಸನಗರ ತಾಲೂಕಿನಾದ್ಯಂತ ಅಂಗನವಾಡಿ ಸೇರಿದಂತೆ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ
ಕೊಡಗಿನಲ್ಲಿ ಭಾರೀ ಗಾಳಿ ಮಳೆ ಮುಂದುವರೆದಿದೆ. ನಾಳೆ ಒಂದು ದಿನ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನ ಹೊರತು ಪಡಿಸಿ, ಅಂಗನವಾಡಿ ಸೇರಿದಂತೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.
ಕರಾವಳಿಯ ಮತ್ತೊಂದು ಜಿಲ್ಲೆ ಉಡುಪಿಯಲ್ಲೂ ಮಳೆ ಮುಂದುವರೆದಿದೆ. ಉಡುಪಿಯಲ್ಲಿ ನಾಳೆಯೂ ಭಾರೀ ಮಳೆ ಮುಂದುವರೆಯಲಿದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿದೆ.