ಬೆಂಗಳೂರು:- ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಂಪರ್ ಬಹುಮಾನ ಘೋಷಿಸಿರುವ ಪಾಲಿಕೆ, ಆ ಮೂಲಕ ಜಾಗೃತಿ ಮೂಡಿಸಲು ಹೊರಟಿದೆ.
Lokayukta Raid: ಕರ್ನಾಟಕದ 55 ಕಡೆ ಲೋಕಾಯುಕ್ತ ರೇಡ್: ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ತಲಾಶ್!
ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್ಗಳನ್ನು ಆಹ್ವಾನಿಸಿರುವ ಪಾಲಿಕೆ, ಮೊದಲ ಐದು ಉತ್ತಮ ರೀಲ್ಸ್ಗಳಿ ತಲಾ 25 ಸಾವಿರ ರೂಪಾಯಿ ಬಹುಮಾನ ಘೋಷಿಸಿದೆ. ಇನ್ನು ದ್ವೀತಿಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಮಾಡಿದ್ದು, ಯಾವ ಶಾಲೆ ಹೆಚ್ಚು ವಿದ್ಯಾರ್ಥಿಗಳ ಬಳಿ ರೀಲ್ಸ್ ಮಾಡಿಸುತ್ತದೆಯೋ ಆ ಶಾಲೆಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವಿಡಿಯೋ ಮಾಡಲು ಉತ್ತೇಜಿಸೋ ಶಿಕ್ಷಕಿಯರಿಗೂ 35 ಸಾವಿರ ರೂಪಾಯಿ ಬಹುಮಾನದ ಆಫರ್ ಕೊಟ್ಟಿದೆ.
ಇತ್ತ ಬಿಬಿಎಂಪಿಯ ಈ ರೀಲ್ಸ್ ಕಾಂಪಿಟೇಷನ್ಗೆ ಸಾರ್ವಜನಿಕರಿಂದ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಪಾಲಿಕೆ ಡೆಂಗ್ಯೂ ಬಗ್ಗೆ ಅರಿವು ಮೂಡಿಸಲು ಹೊರಟಿರೋದೇನೋ ಸರಿ. ಆದ್ರೆ ನಗರದಲ್ಲಿ ಸರಿಯಾಗಿ ಸ್ವಚ್ಛತೆ ಕಾಪಾಡಬೇಕು, ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಮಕ್ಕಳಿಗೆ ಈ ರೀತಿ ರೀಲ್ಸ್ ಮಾಡಿಸುತ್ತಿರುವುದರಿಂದ ಏನೂ ಪ್ರಯೋಜನ ಇಲ್ಲ ಅಂತಾ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ರೀಲ್ಸ್ ಸ್ಪರ್ಧೆಗೆ ಸೋಷಿಯಲ್ ಮೀಡಿಯಾ ಬಳಸಿಕೊಳ್ಳುತ್ತಿರುವ ಪಾಲಿಕೆಯ ಆರೋಗ್ಯ ವಿಭಾಗ, ರೀಲ್ಸ್ ಹಂಚಿಕೊಂಡ ಪ್ರತಿಯೊಬ್ಬರಿಗೂ ಡೆಂಗ್ಯೂ ವಾರಿಯರ್ ಎಂಬ ಪಟ್ಟ ನೀಡುತ್ತಿದೆ.
ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಮುಂದಾಗಿರೋದು ಸರಿ, ಆದ್ರೆ ಈ ಕೆಲಸ ಬರೀ ರೀಲ್ಸ್ಗೆ ಸೀಮಿತವಾಗಬಾರದು. ಲಕ್ಷ ಲಕ್ಷ ಹಣವನ್ನ ರೀಲ್ಸ್ ಗೆ ಕೊಡುವ ಬದಲು ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜನರು ಸಲಹೆ ನೀಡುತ್ತಿದ್ದಾರೆ.