ಮೈಸೂರು:- ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತರಾದ ಗಂಗರಾಜು ಮತ್ತು ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಕಾಂಗ್ರೆಸ್ ಘಟಕ ದೂರು ನೀಡಿದೆ.
Bagalakote: ಪ್ರವಾಸೋದ್ಯಮ ಇಲಾಖೆ ವಂಚನೆ ಕೇಸ್ ನಲ್ಲಿ ಮತ್ತೆ 6 ಮಂದಿ ಅರೆಸ್ಟ್!
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ವ್ಯಕ್ತಿತ್ವ ಕೆಡಿಸಲು ಸಂಚು ರೂಪಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ಗೆ ದೂರು ನೀಡಲಾಗಿದೆ
ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ನೇತೃತ್ವದಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಮೈಸೂರು ನಗರಾಧ್ಯಕ್ಷ ಆರ್.ಮೂರ್ತಿ ಅವರು ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ಗೆ ದೂರು ನೀಡಿದ್ದು, ಸಿದ್ದರಾಮಯ್ಯನವರ ವಿರುದ್ಧ ಸುಳ್ಳು ಆರೋಪ ಮಾಡಿರುವ RTI ಕಾರ್ಯಕರ್ತರಾದ ಗಂಗರಾಜು, ಸ್ನೇಹಮಯಿ ಕೃಷ್ಣ ವಿರುದ್ಧ ಕಾನೂನು ಕ್ರಮಜರುಗಿಸುವಂತೆ ಮನವಿ ಮಾಡಿದ್ದಾರೆ.