ಬೆಂಗಳೂರು:- ಇಂದು ಕರ್ನಾಟಕದ ಹಲವು ಜಿಲ್ಲೆಗಳ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಪಂಡರಾಪುರದ ವಿಠ್ಠಲನ ದರ್ಶನಕ್ಕೆ ಹೋಗಿದ್ದ ವೇಳೆ ಕೃತ್ಯ!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹೀಗಾಗಿ ಇಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜ್ಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜುವರೆಗೆ ರಜೆ ನೀಡಿ ಡಿಸಿ ಮುಳೈ ಮುಗಿಲನ್ ಆದೇಶಿಸಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರಲಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ ವರ್ಷಧಾರೆ ಮುಂದುವರೆದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, PU ಕಾಲೇಜಿಗಳಿಗೆ ಇಂದು ಕೂಡ ರಜೆ ನೀಡಲಾಗಿದೆ. ಯುಜಿ, ಪಿಜಿ, ITI, ಡಿಪ್ಲೊಮಾ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಾಗರ, ಸೊರಬ, ಹೊಸನಗರ ತಾಲೂಕಿನ ಶಾಲಾ ಕಾಲೇಜಿಗೆ ಆಯಾ ತಹಶೀಲ್ದಾರ್ಗಳು ಇಂದು ರಜೆ ಘೋಷಣೆ ಮಾಡಿದ್ದಾರೆ.
ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಹಾಗಾಗಿ ಜಿಲ್ಲೆಯ ಆರು ತಾಲ್ಲೂಕುಗಳ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ನೀಡಿ ಡಿಡಿಪಿಐ ಹೆಚ್ಕೆ ಪಾಂಡು ಆದೇಶಿಸಿದ್ದಾರೆ.