ಟಾಲಿವುಡ್ ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಹಾಗೂ ಪುಷ್ಪ 2 ಸಿನಿಮಾದ ನಿರ್ದೇಶಕ ಸುಕುಮಾರ್ ಮಧ್ಯೆ ಕಿರಿಕ್ ಆಗಿದೆ ಎನ್ನುವ ಮಾತು ಕೇಳಿ ಬಂದಿದೆ. ಇದೇ ಕಾರಣಕ್ಕೆ ನಟ ಅಲ್ಲು ಅರ್ಜುನ್ ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿತ್ತು. ಆದರೆ ಇದೆಲ್ಲಾ ಜಸ್ಟ್ ಗಾಳಿ ಸುದ್ದಿಯಷ್ಟೇ. ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಮಧ್ಯೆ ಯಾವುದೇ ಮನಸ್ತಾಪ ಇಲ್ಲ ಎಂದು ಅಲ್ಲು ಅರ್ಜುನ್ ಅವರ ಆಪ್ತ ಗೆಳೆಯ ಹಾಗೂ ಗೀತಾ ಆರ್ಟ್ಸ್ನ ನಿರ್ಮಾಪಕರಲ್ಲಿ ಒಬ್ಬರಾದ ಬನ್ನಿ ವಾಸು ಸ್ಪಷ್ಟನೆ ನೀಡಿದ್ದಾರೆ.
‘ಪುಷ್ಪ 2’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ತಂಡದವರು ಸಿನಿಮಾದ ಬಿಡುಗಡೆ ದಿನಾಂಕವನ್ನು ಡಿಸೆಂಬರ್ಗೆ ಮುಂದೂಡಿದರು. ಹೀಗೆಕೆ ಎನ್ನುವ ಪ್ರಶ್ನೆ ಮೂಡಿತ್ತು. ಈ ಮಧ್ಯೆ ಅಲ್ಲು ಅರ್ಜುನ್ ಅವರು ಯುರೋಪ್ ಪ್ರವಾಸ ತೆರಳಿದರೆ, ಸುಕುಮಾರ್ ಅಮೆರಿಕಕ್ಕೆ ಹಾರಿದರು. ಈ ಎಲ್ಲಾ ಕಾರಣದಿಂದ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಆದರೆ, ಇದರಲ್ಲಿ ಸತ್ಯ ಇಲ್ಲ ಎನ್ನುವ ಸ್ಪಷ್ಟನೆ ಸಿಕ್ಕಿದೆ.
ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಬನ್ನಿ ವಾಸು ಅವರು, ‘ನಾವು ಈ ರೀತಿಯ ವದಂತಿಗಳನ್ನು ಕೇಳಿ ನಕ್ಕಿದ್ದೇವೆ. ಎಲ್ಲರೂ ತಮಗೆ ಬೇಕಾದ ರೀತಿಯಲ್ಲಿ ಬರೆದುಕೊಳ್ಳುತ್ತಿದ್ದಾರೆ. ನಡೆದ ಘಟನೆಯನ್ನು ಸಂಪೂರ್ಣವಾಗಿ ನೆಗೆಟಿವ್ ರೀತಿಯಲ್ಲಿ ಬಿಂಬಿಸಲಾಗಿದೆ’ ಎಂದು ಹೇಳುವ ಮೂಲಕ ವಿವಾದಗಳಿಗೆ ಬನ್ನಿ ವಾಸು ತೆರೆ ಎಳೆದಿದ್ದಾರೆ.
‘ಪುಷ್ಪ 2 ಸಿನಿಮಾದ 15 ದಿನಗಳ ಕೆಲಸ ಮಾತ್ರ ಬಾಕಿ ಇದೆ. ಅದರಲ್ಲಿ ಕ್ಲೈಮ್ಯಾಕ್ಸ್ ಹಾಗೂ ಸಾಂಗ್ ಇದೆ. ಸಿನಿಮಾ ಶೂಟಿಂಗ್ ಪೂರ್ಣಗೊಳಿಸಲು ಫಹಾದ್ ಫಾಸಿಲ್ ಡೇಟ್ಸ್ನ ಅಗತ್ಯ ಇದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಸಿನಿಮಾ ವಿಳಂಬಕ್ಕೆ ಕಾರಣ ಏನು ಎಂಬುದನ್ನು ತಿಳಿಸಿದ್ದಾರೆ.
‘ಸುಕುಮಾರ್ ಅವರು ಈ ಚಿತ್ರದ ಶೂಟಿಂಗ್ ಇನ್ನೂ ಆರು ತಿಂಗಳು ಶೂಟ್ ಮಾಡಬೇಕು ಎಂದರೆ ಅಲ್ಲು ಅರ್ಜುನ್ ಇದಕ್ಕೆ ಒಪ್ಪಿಕೊಳ್ಳುತ್ತಾರೆ. ಇಬ್ಬರ ಮಧ್ಯೆ ಅಷ್ಟು ಒಳ್ಳೆಯ ಬಾಂಡಿಗೆ ಇದೆ. ಅದನ್ನು ಈಗ ಪ್ರಶ್ನೆ ಮಾಡಬೇಡಿ’ ಎಂದು ಹೇಳಿದ್ದಾರೆ.