ಬೆಂಗಳೂರು: ಅಜೀಂ ಪ್ರೇಮ್ ಜಿ ಪ್ರತಿಷ್ಠನದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ವಾರದ ನಾಲ್ಕು ದಿನಗಳು ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ಸರಬರಾಜು ಮಾಡಲು ಒಪ್ಪಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾದ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ವಾರದಲ್ಲಿ ನಾಲ್ಕು ದಿನಗಳು ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿದ್ದು ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ಅಗತ್ಯ ಎಂದು ಹೇಳಿದರು.
ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕುಮಾರಸ್ವಾಮಿ ಭೇಟಿ ಸುದ್ದಿಯಾಗದಂತೆ ತಡೆ: ಜೆಡಿಎಸ್ ಆಕ್ರೋಶ
ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.