ಚೆನ್ನೈ:- ನಮ್ಮ ಸರ್ಕಾರದ ಎಲ್ಲಾ ಸಚಿವರು ಉಪ ಮುಖ್ಯಮಂತ್ರಿಗಳೇ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಅರೆಸ್ಟ್!
ಈ ಸಂಬಂಧ ಮಾತನಾಡಿದ ಅವರು, ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರದ ಎಲ್ಲಾ ಸಚಿವರು ಉಪ ಮುಖ್ಯಮಂತ್ರಿಗಳು ಎಂದರು. ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ನಮ್ಮ ಸರ್ಕಾರದ ಎಲ್ಲಾ ಸಚಿವರು ಉಪ ಮುಖ್ಯಮಂತ್ರಿಗಳು ಎಂದು ನಾನು ಈ ಹಿಂದೆಯೇ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನೆ ಎಂದಿದ್ದಾರೆ.
ಅದೇ ವೇಳೆ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ನೇತೃತ್ವದ ಸರ್ಕಾರ ಮರು ಆಯ್ಕೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. “2026 ರ ಚುನಾವಣೆ ನಮ್ಮ ಗುರಿಯಾಗಿದೆ. ಹಿಂದಿನ ಚುನಾವಣೆಯಂತೆ ನಾವು ಕೆಲಸ ಮಾಡಬೇಕು ಮತ್ತು ಗೆಲುವು ಸಾಧಿಸಬೇಕು. ನಮ್ಮ ನಾಯಕ, ಸಿಎಂ ಎಂ.ಕೆ.ಸ್ಟಾಲಿನ್ ಮತ್ತೊಮ್ಮೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟವೇ ಗೆಲ್ಲಲಿದೆ.
ಪಕ್ಷದ ಬೆಂಬಲಿಗರು ಮತ್ತು ಅನುಯಾಯಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಬೇಕು ಮತ್ತು ದಿನಪತ್ರಿಕೆಗಳನ್ನು ಓದುವ ಮೂಲಕ ಅದರ ಚಟುವಟಿಕೆಗಳನ್ನು ಮುಂದುವರಿಸಬೇಕು ಎಂದು ಉದಯನಿಧಿ ಕರೆ ನೀಡಿದ್ದಾರೆ.