ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಕಾರಕ್ಕೆ 40 ಕೋಟಿ ರೂ. ವಂಚನೆ ಮಾಡಿದ್ದಾರೆ ಅನ್ನೋ ಆರೋಪ ರಾಜಕೀಯ ಪಿತೂರಿಯಾಗಿದ್ದು, ಸಿಎಂ ಅಂತಹ ಕೆಲಸ ಮಾಡಿಲ್ಲ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 87 ಕೋಟಿ ಹಗರಣದಲ್ಲಿ 40 ಕೋಟಿ ರೂ. ಜಮಾ ಆಗಿದೆ. ಎಲ್ಲವನ್ನೂ ವಾಪಸ್ ಪಡೆಯಲು ಸರಕಾರ ಕ್ರಮ ಕೈಗೊಂಡಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದರು.
ಕಾನೂನಿನಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ವಿಚಾರವು ತನಿಖಾ ಹಂತದಲ್ಲಿದೆ. ಪೂರ್ಣಗೊಳ್ಳುವವರೆಗೂ ಮಾತನಾಡುವುದು ತಪ್ಪು. ಹಣ ಯಾರು ತೆಗೆದುಕೊಂಡು ಹೋಗಿದ್ದಾರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಬ್ಬಾಬ್ಬ.. ನೀಲಗಿರಿ ಎಲೆಗಳಿಂದ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ..?
ಶಾಲೆಗಳಿಗೆ ಕಡಿಮೆ ಗುಣಮಟ್ಟದ ಅಕ್ಕಿಯನ್ನು ಪೂರೈಸಲಾಗುತ್ತಿದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹಾಸ್ಟೆಲ್, ಶಾಲೆಗಳಿಗೆ ಗುಣಮಟ್ಟದ ಅಕ್ಕಿಯನ್ನು ನೀಡುವ ಬಗ್ಗೆ ಸಚಿವರೊಂದಿಗೆ ಹಾಗೂ ಸದನದಲ್ಲಿಯೂ ಚರ್ಚಿಸಲಾಗಿದೆ. ಯಾವುದೇ ಕಾರಣಕ್ಕೂ ಕಳಪೆ ಗುಣಮಟ್ಟದ ಅಕ್ಕಿಯನ್ನು ನೀಡಿಲ್ಲವೆಂದು ಸ್ಪಷ್ಟಪಡಿಸಿದರು.