ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆಂದು ವರದಿಯಾಗಿದೆ.
ಮೆಗಾ ಹರಾಜು ನಿಯಮದ ಪ್ರಕಾರ ಒಂದು ಫ್ರಾಂಚೈಸಿ ನಾಲ್ಕು ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿರುವುದರಿಂದ ಎಲ್ಲಾ ತಂಡಗಳು ಈ ಬಾರಿ ಸಂಪೂರ್ಣ ಬದಲಾಗಲಿವೆ. ಐಪಿಎಲ್ ಮೆಗಾ ಹರಾಜಿಗೆ ಬಿಸಿಸಿಐ ಈಗಾಗಲೇ ಯೋಜನೆಯನ್ನು ರೂಪಿಸುತ್ತಿದೆ. ಈ ವರ್ಷದ ಡಿಸೆಂಬರ್ನಲ್ಲಿ ಮೆಗಾ ಹರಾಜು ನಡೆಯುವ ಸಾಧ್ಯತೆ ಇದೆ. ಈ ಬಾರಿ ಐಪಿಎಲ್ ಟೂರ್ನಿಗೆ ಹಲವು ನಿಯಮಗಳನ್ನು ಪರಿಷ್ಕರಿಸಬಹುದು. ಅಂದ ಹಾಗೆ ಇಂಪ್ಯಾಕ್ಟ್ ನಿಯಮವನ್ನು ಕೂಡ ತೆಗೆಯಬಹುದು.
ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಭಾರತ ತಂಡದ ಮುಂದಿನ ನಾಯಕ ಯಾರೆಂದು ಹೆಸರಿಸಿದ ವಿಕ್ರಮ್ ರಾಠೋರ್.
2024ರ ಐಪಿಎಲ್ ಟೂರ್ನಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡ, ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಇಳಿಸಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವವನ್ನು ನೀಡಿತ್ತು. ಈ ನಿರ್ಧಾರದಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಹಾರ್ದಿಕ್ ಪಾಂಡ್ಯ ಅವರ ನಾಯಕತ್ವವನ್ನು ಹಿರಿಯ ಆಟಗಾರರು ಬೆಂಬಲಿಸಿರಲ್ಲ. ಈ ಹಿನ್ನೆಲೆಯಲ್ಲಿ ಅವರು 2025ರ ಐಪಿಎಲ್ ಟೂರ್ನಿಗೂ ಮುನ್ನ ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರೆಂದು ದೈನಿಕ್ ಜಾಗರಣ್ ವರದಿ ಮಾಡಿದೆ.
ಒಂದು ವೇಳೆ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ತೊರೆದರೆ ಮುಂಬೈ ಇಂಡಿಯನ್ಸ್ಗೆ ದೊಡ್ಡ ಹೊಡೆತ ಬೀಳಲಿದೆ. ಈ ಇಬ್ಬರೂ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಮೆಗಾ ಹರಾಜಿಗೂ ಮುನ್ನ ಮುಂಬೈ ಫ್ರಾಂಚೈಸಿ ಈ ಇಬ್ಬರೂ ಆಟಗಾರರ ಜೊತೆ ಮಾತನಾಡಿ ಉಳಿಸಿಕೊಂಡರೂ ಅಚ್ಚರಿ ಇಲ್ಲ. ಇನ್ನು ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ಇಳಿಸಿ ಸೂರ್ಯಕುಮಾರ್ಗೆ ನಾಯಕತ್ವ ನೀಡಿದರೂ ಅಚ್ಚರಿ ಇಲ್ಲ.