ನವದೆಹಲಿ: ಸದ್ಯ ಮೂರನೇ 2 ಭಾಗದಷ್ಟು ಜನರು ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ. ತೆರಿಗೆ ವ್ಯವಸ್ಥೆಯ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್, ವಿವಿಧ ಪಾವತಿಗಳಿಗೆ ಐದು ಪ್ರತಿಶತ ಟಿಡಿಎಸ್ ಬದಲಿಗೆ ಎರಡು ಪ್ರತಿಶತ ಟಿಡಿಎಸ್ ಅನ್ನು ಒದಗಿಸಲಾಗುತ್ತದೆ ಎಂದರು.
Banking Jobs: ಡಿಗ್ರಿ ಪಾಸಾದವರಿಗೆ ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ..! ಬೇಗ ಅಪ್ಲೈ ಮಾಡಿ
ಮ್ಯೂಚುವಲ್ ಫಂಡ್ ಅಥವಾ ಯುಟಿಐ ಮರುಖರೀದಿಯಲ್ಲಿ ಟಿಡಿಎಸ್ ಅನ್ನು ಶೇಕಡಾ 20ರಷ್ಟು ಹಿಂಪಡೆಯಲಾಗಿದೆ. ಇ-ಕಾಮರ್ಸ್ ಆಪರೇಟರ್ಗಳಿಗೆ TDS ಅನ್ನು ಶೇಕಡಾ 1 ರಿಂದ 0.1 ಕ್ಕೆ ಇಳಿಸಲಾಗಿದೆ. ಅಲ್ಲದೆ, ಟಿಡಿಎಸ್ ತುಂಬುವಲ್ಲಿ ವಿಳಂಬವನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದರು. ವಿಶೇಷವಾಗಿ ಸ್ಟಾಂಡರ್ಡ್ ಡಿಡಕ್ಷನ್ ಮಿತಿ ಹೆಚ್ಚಳ ಮಾಡಿದರಲ್ಲದೆ, ಆದಾಯ ತೆರಿಗೆ ಸ್ಲ್ಯಾಬ್ಗಳಲ್ಲಿ ಪರಿಷ್ಕರಣೆಯನ್ನು ಪ್ರಕಟಿಸಿದರು.
ಹೊಸ ವಿಧಾನದಲ್ಲಿ ಆದಾಯ ತೆರಿಗೆ ಸ್ಲ್ಯಾಬ್ನಲ್ಲಿ ತುಸು ಬದಲಾವಣೆ ಮಾಡಲಾಗಿದೆ. ವಿವರ ಹೀಗಿದೆ
- 0-3 ಲಕ್ಷ ರೂ. ಆದಾಯಕ್ಕೆ ತೆರಿಗೆ ಇಲ್ಲ
- 3 ರಿಂದ 7 ಲಕ್ಷ ರೂ. ವರೆಗಿನ ಆದಾಯದ ಮೇಲೆ ಶೇಕಡಾ 5 ರಷ್ಟು ತೆರಿಗೆ
- 7 ರಿಂದ 10 ಲಕ್ಷ ರೂ. ವರೆಗಿನ ಆದಾಯದ ಮೇಲೆ ಶೇ 10 ತೆರಿಗೆ
- 10-12 ಲಕ್ಷ ರೂ. ವರೆಗೆ ಆದಾಯದ ಮೇಲೆ ಶೇ 15 ತೆರಿಗೆ
- 12-15 ಲಕ್ಷ ರೂ. ವರೆಗೆ ಆದಾಯದ ಮೇಲೆ ಶೇ 20 ತೆರಿಗೆ
- 15 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತದ ಆದಾಯಕ್ಕೆ ಶೇ 30 ತೆರಿಗೆ
ಇನ್ನೂ ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50 ಸಾವಿರದಿಂದ 75 ಸಾವಿರಕ್ಕೆ ಸರ್ಕಾರ ಹೆಚ್ಚಿಸಿಸಲಾಗಿದೆ. ಕುಟುಂಬ ಪಿಂಚಣಿ ಮೇಲಿನ ವಿನಾಯಿತಿ ಮಿತಿಯನ್ನು 15 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸಲಾಗುತ್ತಿದೆ. ಈ ಎರಡು ಬದಲಾವಣೆಗಳಿಂದ ನಾಲ್ಕು ಕೋಟಿ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದು ಹಣಕಾಸು ಸಚಿವರು ಹೇಳಿದರು.