ಕಾರವಾರ: ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಕುಟುಂಬಸ್ಥರಿಂದ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದು ಅರ್ಜಿ ಸಲ್ಲಿಸಲಾಗಿದೆ. ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿ ಒಂದು ವಾರ ಕಳೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿರುವ ಸಾವಿರಾರು ಟನ್ ಮಣ್ಣು ತೆರವು ಕಾರ್ಯ 70% ಮುಕ್ತಾಯವಾಗಿದೆ.
ಮೃತರಾದ ಹನ್ನೊಂದು ಜನರ ಪೈಕಿ 8 ಜನರ ಮೃತದೇಹ ಪತ್ತೆ ಆಗಿದ್ದು 4 ಜನರ ಶವ ಪತ್ತೆಯಾಗಬೇಕಿದೆ. ಈ ಮಧ್ಯೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಕುಟುಂಬಸ್ಥರಿಂದ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದು ಅರ್ಜಿ ಸಲ್ಲಿಸಲಾಗಿದೆ. ಕಾರ್ಯಾಚರಣೆ ಅವೈಜ್ಞಾನಿಕವಾಗಿ, ವಿಳಂಬವಾಗಿ ನಡೀತಿದೆ ಎಂದು ಲಾರಿ ಚಾಲಕ ಅರ್ಜುನ್ ಕುಟುಂಬಸ್ಥರಿಂದ ಆರೋಪಿಸಲಾಗಿದೆ. ಹಾಗಾಗಿ ರಾಜ್ಯ ಸರ್ಕಾರದಿಂದ ಹೈಕೋರ್ಟ್ ವರದಿ ಕೇಳಿದ್ದು, ನಾಳೆ ಈ ಪ್ರಕರಣ ಸಂಬಂಧ ವಿಚಾರಣೆ ನಡೆಯಲಿದೆ.
ಮಣ್ಣಿನ ಕುಸಿತದಿಂದ ನದಿಯಲ್ಲಿ ತೇಲಿಹೋದ ಗಂಗೆಕೊಳ್ಳದ ಲೋಕೇಶ್ ನಾಯ್ಕ, ಶಿರೂರಿನ ಜಗನ್ನಾಥ ಜಟ್ಟಿ, ಉಳವರೆ ಗ್ರಾಮದ ಸಣ್ಣಿ ಹನುಮಂತಗೌಡ, ಕೇರಳ ಮೂಲದ ಅರ್ಜುನ್ ಶವ ಪತ್ತೆಯಾಗಬೇಕಿದೆ. ಶಂಕಿತ ಸ್ಥಳದಲ್ಲಿ ರಾಡಾರ್ ಮೂಲಕ ಶೋಧ ಕಾರ್ಯ ಮಾಡಿದರೂ ಟ್ರಕ್, ಟ್ಯಾಂಕರ್ಗಳು ಇರುವುದು ಪತ್ತೆಯಾಗಿಲ್ಲ.
ಈ ಕಾರಣದಿಂದ ರಸ್ತೆಯ ಬದಿ ಇದ್ದ ಅಂಗಡಿ ನೆಲಸಮವಾದ ಕಡೆ ಶೋಧ ಕಾರ್ಯ ನಡೆಸುತಿದ್ದು ಗಂಗಾವಳಿ ನದಿಗೆ ಬಿದ್ದ ಮಣ್ಣಿನ ಗುಡ್ಡದಲ್ಲಿ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ಆರ್ಮಿ ಕಮಾಂಡೋಗಳ ತಂಡ ಶೋಧ ಕಾರ್ಯ ಮುಂದುವರೆಸಿದೆ.