ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮುಂಗಾರು ಮಾರುತ ಮತ್ತಷ್ಟು ಚುರುಕುಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಜಿಲ್ಲೆಗಳಿಗೆ ಜುಲೈ 24 ರಿಂದ 26ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಸಹ ಜುಲೈ 24ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಯಾದಗಿರಿ, ಕಲಬುರಗಿ, ರಾಯಚೂರು ಜಿಲ್ಲೆಯಲ್ಲೂ ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಜುಲೈ 26ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿಗೆ ಐದು ದಿನಗಳ ಕಾಲ ಮಳೆ ಅಲರ್ಟ್ ನೀಡಲಾಗಿದೆ. ಜುಲೈ 27ರ ವರೆಗೆ ನಗರದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಸಾಧಾರಣ ರೀತಿಯಲ್ಲಿ ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 ಕಿಮೀ) ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಮೇಲೆ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ಸಂಭವಿಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ಬರುವ ಸಾಧ್ಯತೆಯಿದೆ.