ಚಿಕ್ಕಬಳ್ಳಾಪುರ:- ಮಗನ ಸಮನಾದ ಸ್ವಂತ ಅಣ್ಣನ ಮಗನನ್ನೇ ಪಿಸ್ತೂಲ್ನಿಂದ ಗುಂಡು ಹಾರಿಸಿ ಚಿಕ್ಕಪ್ಪ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ.
ಪಾರಿವಾಳ ರಕ್ಷಣೆಗೆ ವಿದ್ಯುತ್ ಕಂಬ ಏರಿದ್ದ ಬಾಲಕ: ಕರೆಂಟ್ ಶಾಕ್ ತಗುಲಿ ಸಾವು!
ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಘಟನೆ ಜರುಗಿದೆ. ನಜೀರ್ ಅಹ್ಮದ್ ಕೊಲೆಯಾದ ದುರ್ದೈವಿ ಆಗಿದ್ದು, ಬಶೀರ್ ಅಹ್ಮದ್ (66) ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ. ಅಣ್ಣ ಮಾಬೂಸಾಬಿ ಮೇಲೂ ಮಾರಕಾಸ್ತ್ರದಿಂದ ದಾಳಿ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಾಬೂಸಾಬಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿ ಬಶೀರ್ ಅಹ್ಮದ್ ಸೌದಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಊರಿಗೆ ಬಂದಿದ್ದ ಎನ್ನಲಾಗಿದೆ. ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ಬಶೀರ್ ಅಹ್ಮದ್ನನ್ನು ವಶಕ್ಕೆ ಪಡೆದಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.