ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್ಐ ಎಸ್.ಆರ್. ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.
ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.
ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್ಐ ಹೇಳಿದ್ದಾರೆ.