ಹಾರ್ದಿಕ್ ಪಾಂಡ್ಯ ತಮ್ಮ ಮಾಜಿ ಪತ್ನಿಯ ಇನ್ಸ್ಟಾಗ್ರಾಮ್ ಪೋಸ್ಟ್ಗೆ ಲೈಕ್ ಮತ್ತು ಕಮೆಂಟ್ ಮಾಡಿದ್ದಾರೆ. ಪಾಂಡ್ಯ ಎಮೊಜಿ ಮೂಲಕ ಪ್ರತಿಕ್ರಿಯಿಸಿದ ಪೋಸ್ಟ್ನ ಫೋಟೋ ವೈರಲ್ ಆಗಿದೆ.
ನಾಯಿಕೊಡೆಗಳಂತೆ ತಲೆ ಎತ್ತಿರುವ ಅನಧಿಕೃತ ನರ್ಸರಿ ಶಾಲೆಗಳು: ಕ್ರಮಕ್ಕೆ ಮುಂದಾದ ಸರ್ಕಾರ!
ಕಳೆದ ವಾರವಷ್ಟೇ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್ ಅವರಿಗೆ ವಿಚ್ಛೇದನ ನೀಡುವ ಮೂಲಕ 4 ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದರು. ಇದೀಗ ಈ ಘಟನೆ ಸಂಭವಿಸಿ ಒಂದು ವಾರ ವಾರ ಕಳೆಯುವ ಮುನ್ನವೇ ಮಾಜಿ ಹೆಂಡತಿಯ ಪೋಸ್ಟ್ ಗೆ ರಿಯಾಕ್ಟ್ ಮಾಡಿದ್ದಾರೆ.
ನತಾಶಾ ಸ್ಟಾಂಕೋವಿಕ್ ತಮ್ಮ ಮಗನೊಂದಿಗೆ ಲಂಡನ್ನಲ್ಲಿರುವ ಡೈನೋಸಾರ್ ಮಾದರಿಯ ವಿಲಕ್ಷಣ ಹಕ್ಕಿಯ ಪಳಯುಳಿಕೆ ಇರುವಂತಹ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದ ಹಲವು ಫೋಟೊಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊಗೆ ಹಾರ್ದಿಕ್ ಪಾಂಡ್ಯ ಸೂಪರ್ ಮತ್ತು ಲವ್ ಎಮೊಜಿಯ ಮೂಲಕ ಪ್ರತಿಕ್ರಿಯಿಸಿದ್ದಾರೆ. ಇದನ್ನು ನೆಟ್ಟಿಗರು ಸ್ಕ್ರೀನ್ ಶಾರ್ಟ್ ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಇಷ್ಟು ಆತ್ಮೀಯವಾಗಿರುವ ನೀವು ಯಾಕೆ ವಿಚ್ಛೇದನ ಪಡೆದು ಮಗನಿಂದ ತಂದೆ ತಾಯಿಯ ಪ್ರೀತಿಯನ್ನು ಕಸಿದುಕೊಂಡಿದ್ದೀರಾ? ಎಂದು ಕೆಲವರು ಕಮೆಂಟ್ ಮೂಲಕ ಪ್ರಶ್ನೆ ಮಾಡಿದ್ದಾರೆ
ಹಾರ್ದಿಕ್ ಮತ್ತು ನತಾಶಾ ನಡುವಿನ ಬ್ರೇಕಪ್ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್ಗೆ ಕಾರಣವಾಯಿತು