ಬೆಂಗಳೂರು: ಅಂಗನವಾಡಿ ಕಾರ್ಯಕರ್ತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ ಗೌರವಧನ ಹೆಚ್ಚಳ ಮಾಡಲಾಗುತ್ತದೆ.ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಹಾಗೆ ಗೃಹ ಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು
1 ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ!
ಜೂನ್, ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಹಾಕಲು ತಾಂತ್ರಿಕ ದೋಷವಾಗಿದ್ದು, ಈಗಾಗಲೇ ಡಿಬಿಟಿ ಪುಶ್ ಮಾಡುತ್ತಿದ್ದೇವೆ. 8-10 ದಿನದೊಳಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.