ಬೆಂಗಳೂರು:- ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
40 ವರ್ಷದ ಉದ್ಯೋಗಿ ಸುಶಾಂತ್ (40) ಆತ್ಮಹತ್ಯೆ ಶರಣಾದವರು ಎನ್ನಲಾಗಿದೆ. ಮೃತ ಸುಶಾಂತ್, ಕೆಲಸದ ನಿಮಿತ್ತ ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹೀಗೆ ಬಂದಿದ್ದವ ಸಂಜೆ ಮೈಸೂರಿಗೆ ಹಿಂದಿರುಗಲು ಸುಶಾಂತ್ ರೈಲು ನಿಲ್ದಾಣಕ್ಕೆ ಬಂದಿದ್ದ. ಆತ್ಮಹತ್ಯೆಗೂ ಮುನ್ನ ಒಡೆಯರ್ ಎಕ್ಸ್ಪ್ರೆಸ್ ರೈಲು ಹತ್ತಿದ್ದಾನೆ. ಅದೇನಾಯಿತೋ ಏನೋ, ಹೊರಡುವ ಸಂದರ್ಭದಲ್ಲಿ ಕೆಳಗಿಳಿದು ರೈಲಿಗೆ ತಲೆಕೊಟ್ಟಿದ್ದಾನೆ. ಘಟನೆ ಬಗ್ಗೆ ರೈಲ್ವೆ ಪೊಲೀಸರು ಆತನ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಶ್ಚಿಮ ಮೃತನ ಕುಟುಂಬ ಬಂಗಾಳದಿಂದ ಬೆಂಗಳೂರಿಗೆ ಬರುತ್ತಿದ್ದಾರೆ. ಈ ಕುರಿತು ಮೆಜೆಸ್ಟಿಕ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.