ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಂಧನ ಆಗಿದೆ. ಇನ್ನೂ ಮೃತ ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಸ್ಥರಿಗೆ ವಿನೋದ್ ರಾಜ್ ಸಾಂತ್ವಾನ ಹೇಳಿ 1 ಲಕ್ಷ ರೂ. ನೆರವು ನೀಡಿದ್ದಾರೆ.
Foot Care: ಪಾದದ ಅಡಿಯಲ್ಲಿ ಸುಡುವ ರೀತಿ ಆಗ್ತಿದ್ಯಾ..? ನಿವಾರಣೆಗೆ ಈ ಮನೆ ಮದ್ದು ಬೆಸ್ಟ್
ಮೃತ ರೇಣುಕಾಸ್ವಾಮಿ ನಿವಾಸಕ್ಕೆ ತೆರಳಿ ಪೋಷಕರಿಗೆ ಮತ್ತು ರೇಣುಕಾಸ್ವಾಮಿ ಪತ್ನಿ ಸಹನಾಗೆ ವಿನೋದ್ ರಾಜ್ ಸಾಂತ್ವಾನ ಹೇಳಿದ್ದಾರೆ. ನಿಮ್ಮ ಮಗ ಮರಳಿ ಬರಲಿ ಅಂತ ಹಾರೈಸಿದ್ದಾರೆ. ಬಳಿಕ 1 ಲಕ್ಷ ರೂ. ಕೊಡುವ ಮೂಲಕ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ್ದಾರೆ.