ಭಾರತ ಹಾಗೂ ಬಾಂಗ್ಲಾದೇಶ ಮಹಿಳಾ ತಂಡಗಳ ನಡುವಿನ ಮೊದಲ ಸೆಮಿಫೈನಲ್ ಪಂದ್ಯ ಶ್ರೀಲಂಕಾದ ದಂಬುಲಾದ ರಂಗಿರಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ವಸತಿ ಸಚಿವ ಜಮೀರ್ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ, ಹರ್ಮನ್ ಪಡೆಯ ಕರಾರುವಕ್ಕಾದ ದಾಳಿಗೆ ತತ್ತರಿಸಿ ನೂರು ರನ್ಗಳನ್ನು ದಾಖಲಿಸಲು ಸಾಧ್ಯವಾಗದೆ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 80 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ ಭಾರತಕ್ಕೆ 81 ರನ್ಗಳ ಗೆಲುವಿನ ಗುರಿ ನೀಡಿದೆ.
ಬಾಂಗ್ಲಾ ತಂಡದ ಪರ ನಾಯಕಿ ನಿಗರ್ ಸುಲ್ತಾನಾ ಅತ್ಯಧಿಕ 32 ರನ್ ದಾಖಲಿಸಿದರೆ, ಶೋರ್ನಾ ಅಖ್ತರ್ 19 ರನ್ಗಳ ಕಾಣಿಕೆ ನೀಡಿದರು. ಉಳಿದವರಿಂದ ಒಂದಂಕಿ ಮೊತ್ತ ದಾಟಲೂ ಸಾಧ್ಯವಾಗಲಿಲ್ಲ. ಭಾರತದ ಪರ ವೇಗಿ ರೇಣುಕಾ ಸಿಂಗ್ ಠಾಕೂರ್ ಹಾಗೂ ಸ್ಪಿನ್ನರ್ ರಾಧಾ ಯಾದವ್ ತಲಾ 3 ವಿಕೆಟ್ ಪಡೆದರೆ, ಪೂಜಾ ವಸ್ತ್ರಾಕರ್ ಹಾಗೂ ದೀಪ್ತಿ ಶರ್ಮಾ ತಲಾ 1 ವಿಕೆಟ್ ಪಡೆದರು