ಬೆಂಗಳೂರು:- ನೂತನ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ಆಯ್ಕೆ ಆಗಿದ್ದಾರೆ.
ಕರ್ನಾಟಕ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ರಜನೀಶ್ ಪತ್ನಿ ಶಾಲಿನಿ ರಜನೀಶ್ ಅವರು ಮುಂದಿನ ನೂತನ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ.
ಸಚಿವ ಸಂಪುಟದಲ್ಲಿ ಶಾಲಿನಿ ರಜನೀಶ್ರನ್ನು ಸರ್ಕಾರದ ಸಿಎಸ್ ಆಗಿ ಮಾಡಲು ತೀರ್ಮಾನಿಸಿದೆ ಎಂದು ಸಚಿವ HK ಪಾಟೀಲ್ ಹೇಳಿದ್ದಾರೆ.
ಹಾಲಿ ಸಿಎಸ್ (ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ) ರಜನೀಶ್ ಗೋಯಲ್ 5 ದಿನದಲ್ಲಿ ನಿವೃತ್ತಿ ಆಗುತ್ತಾರೆ. ಹೀಗಾಗಿ ನೂತನ ಸಿಎಸ್ ಆಗಿ ಶಾಲಿನಿ ರಜನೀಶ್ರನ್ನು ನೇಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಅಧಿಕೃತ ಮಾಹಿತಿ ನೀಡಿದರು. ಇದರೊಂದಿಗೆ ಪತಿ ನಿವೃತ್ತಿ ಬೆನ್ನಲ್ಲೇ ಅದೇ ಹುದ್ದೆ ಪತ್ನಿಗೆ ದಕ್ಕಿದೆ.