ಭಾರತ ತಂಡವು ಬಾಂಗ್ಲಾ ವಿರುದ್ಧ 10 ವಿಕೆಟ್ಗಳಿಂದ ಗೆದ್ದು ಏಷ್ಯಾಕಪ್ ಫೈನಲ್ಗೇರಿದೆ. ಶ್ರೀಲಂಕಾದ ದಂಬುಲಾದ ರಂಗಿರಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ ಮಹಿಳಾ ತಂಡಗಳ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ.
Nirmala Sitharaman: ಉದ್ಯೋಗ ಹೆಚ್ಚಳಕ್ಕೆ ನಿರ್ಮಲಾ ಸೀತಾರಾಮನ್ ಮೂರು ಹೊಸ ಸ್ಕೀಂ ಘೋಷಣೆ..!
ಲೀಗ್ ಸುತ್ತಿನಲ್ಲಿ ಆಡಿದ ಮೂರೂ ಪಂದ್ಯಗಳನ್ನು ಗೆದ್ದು ಸೆಮಿಫೈನಲ್ಗೆ ಲಗ್ಗೆ ಇಟ್ಟಿದ್ದ ಟೀಂ ಇಂಡಿಯಾ, ಇದೀಗ ಸೆಮಿಫೈನಲ್ ಪಂದ್ಯದಲ್ಲೂ ಬಾಂಗ್ಲಾ ತಂಡವನ್ನು ಸುಲಭವಾಗಿ ಮಣಿಸಿ ಸತತ ಐದನೇ ಬಾರಿಗೆ ಫೈನಲ್ಗೇರಿದೆ. ಇದೀಗ ಇಂದು ರಾತ್ರಿ ನಡೆಯಲ್ಲಿರುವ ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವಿನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ ಪಂದ್ಯದಲ್ಲಿ ಅಜೇಯ ಭಾರತವನ್ನು ಎದುರಿಸಲಿದೆ ಎನ್ನಲಾಗಿದೆ.