ಗದಗ: ಜಿಲ್ಲೆಯಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವದ ರಜತ ಮಹೋತ್ಸವ ಆಚರಿಸಲಾಯಿತು. ಗದಗ ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಕಾರ್ಯಕ್ರಮ ನಡೆಯಿತು.
ಗದಗ ಶಿವಾನಂದ ಬೃಹನ್ಮಠದ ಅಭಿನವ ಶಿವಾನಂದ ಸ್ವಾಮೀಜಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. 1962ರ ಚೈನಾ ಯುದ್ಧ, 1965, 1971ರ ಇಂಡೋ-ಪಾಕ್ ಯುದ್ಧ ಹಾಗೂ 1999ರ ಕಾರ್ಗಿಲ್ ಯುದ್ಧದಲ್ಲಿ ತಮ್ಮ ಪ್ರಾಣ ಅರ್ಪಣೆ ಮಾಡಿದ ಹುತಾತ್ಮ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು.
ಭಾರೀ ಮಳೆ: ನಿಪ್ಪಾಣಿ ತಾಲೂಕಿನಲ್ಲಿ ಪ್ರವಾಹ ಭೀತಿ, ಗ್ರಾಮಸ್ಥರಿಗೆ ಆತಂಕ!
ನಂತರ ಒಂದು ನಿಮಿಷ ಮೌನಾಚರಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಸತತ 85 ದಿನಗಳ ಹೋರಾಟದ ಫಲವಾಗಿ ಜಯ ಸಾಧಿಸುವ ಮೂಲಕ ಸಂತಸ ಹಾಗೂ ದುಃಖ ಎರಡನ್ನು ಸಮ್ಮಿಳಿತ ಮಾಡಿಕೊಂಡು ಕಾರ್ಗಿಲ್ ವಿಜಯೋತ್ಸವ ಆಚರಿಸಕೊಂಡು ಬರಲಾಗುತ್ತಿದೆ.
ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸುವಂತಾಗಬೇಕು. ಸರ್ಕಾರದ ಕಾರ್ಯಕ್ರಮವನ್ನಾಗಿ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಿಂದ ನಗರದ ಕಿತ್ತೂರು ಚೆನ್ನಮ್ಮ ವೃತ್ತದಿಂದ ಮುಳಗುಂದ ನಾಕಾ, ಬಸವೇಶ್ವರ ವೃತ್ತ, ಹುಯಿಲಗೋಳ ನಾರಾಯಣರಾಯರ ವೃತ್ತ, ಮಹೇಂದ್ರಕರ್ ವೃತ್ತ, ಮಹಾತ್ಮ ಗಾಂಧಿ ವೃತ್ತ, ಭೂಮರಡ್ಡಿ ವೃತ್ತ ಮಾರ್ಗವಾಗಿ ಕೆ.ಎಚ್. ಪಾಟೀಲ ಸಭಾಭವನದವರೆಗೆ ಮೆರವಣಿಗೆ ಮಾಡಲಾಯಿತು.
ಮಾಜಿ ಸೈನಿಕರು, ಎನ್.ಸಿ.ಸಿ ಅಧಿಕಾರಿಗಳು, ಕೆಡೆಟ್ಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಾಜಿ ಸೈನಿಕರು, ವೀರ ನಾರಿಯರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.