ಬೆಂಗಳೂರು:- ಇಂದು ಕರಾವಳಿ-ಮಲೆನಾಡಿನಲ್ಲಿ ವರುಣನ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲೂ ಮಳೆಯಾಗಲಿದೆ

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಜತೆಗೆ ಭಾರಿ ಮಳೆಯೊಂದಿಗೆ 40-50 ಕಿ.ಮೀ ಗಾಳಿಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ