ಮಂಡ್ಯ: ಎರಡು ವರ್ಷದ ಬಳಿಕ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ 29 ಸೋಮವಾರ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಹೆಗ್ಗಡದೇವನಕೋಟೆ ತಾಲೂಕಿನ ಬಿಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಸಮರ್ಪಿಸಲಿದ್ದಾರೆ.
ಸಾರ್ವಜನಿಕರೇ ಗಮನಿಸಿ: ಇಂದಿನಿಂದ 3 ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ..! ಯಾಕೆ ಗೊತ್ತಾ..?
ಕ್ಯುಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯುಸೆಕ್ ಎಂಬುದು Cubic feet per Secondನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯುಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ.
11,524 ಕ್ಯುಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯುಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಆಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.