ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಶಾಸಕರಿಗೆ ಸರಿಯಾಗಿ ಅನುದಾನ ಸಿಗುತ್ತಿಲ್ಲ ಎಂದು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು,
ಬಿಬಿಎಂಪಿಯಿಂದಲೂ ನಯಾ ಪೈಸೆ ಸಿಗುತ್ತಿಲ್ಲ. ಅಭಿವೃದ್ಧಿಗೂ ಹಣ ಬಿಡುಗಡೆ ಮಾಡಿಲ್ಲ. ಕೆರೆ, ಪಾರ್ಕ್ ಯಾವುದಕ್ಕೂ ದುಡ್ಡು ಕೊಟ್ಟಿಲ್ಲ. ಬ್ರ್ಯಾಂಡ್ ಬೆಂಗಳೂರು ಹೆಸರು ಮಾತ್ರ ಉಳಿದುಕೊಂಡಿದೆ. ಬೊಮ್ಮಾಯಿ ಸಿಎಂ ಆಗಿದ್ದಾಗ ಶಾಸಕರಿಗೆ ಅನುದಾನ ಕೊಟ್ಟಿದ್ದರು. ಈ ಸರ್ಕಾರದಲ್ಲಿ ಅನುದಾನ ಸಿಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
Geyser: ಗೀಸರ್ ಸ್ವಿಚ್ ಆಫ್ ಮಾಡಲು ಮರೆತು ಆಫೀಸ್ʼಗೆ ಹೋದರೆ ಏನಾಗುತ್ತದೆ ಗೊತ್ತಾ..?
ಡಿಸಿಎಂ ಸಭೆ ಕರೆದಿದ್ದಾರೆ. ಸಭೆಯಲ್ಲಿ ಅನುದಾನ ತಾರತಮ್ಯ ಮಾಡಬಾರದು ಎಂದು ಹೇಳುತ್ತೇವೆ. ಜನರು ಕೂಡಾ ನಮಗೆ ಶಾಪ ಹಾಕ್ತಿದ್ದಾರೆ. ಹೂಡಿಕೆದಾರರು ಯಾರು ಬರುತ್ತಿಲ್ಲ. ಕಾಂಗ್ರೆಸ್ ಅವರು ಬೇಕಾದ್ರೆ 100 ಕೋಟಿ ರೂ. ತೆಗೆದುಕೊಳ್ಳಲಿ. ನಮಗೆ 25 ಕೋಟಿ ಆದರೂ ನೀಡಲಿ. ಅನುದಾನದಲ್ಲಿ ತಾರತಮ್ಯ ಮಾಡೋದು ಬೇಡ ಎಂದು ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.