ಬೆಳಗಾವಿ: ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆ ಆಗುತ್ತಿದೆ. ಡೆಂಗ್ಯೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಡುವವರ ಸಂಖ್ಯೆಯು ಹೆಚ್ಚುತ್ತಿದೆ. ಸದ್ಯ ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ. ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ 14 ವರ್ಷದ ಪ್ರಣಾಲಿ ಹುಂದ್ರೆ ಮೃತ ಬಾಲಕಿಯಾಗಿದ್ದು, ಭಾನುವಾರ ಬಾಲಕಿಗೆ ಒಂದೆರಡು ಸಲ ವಾಂತಿ – ಭೇದಿ ಆಗಿದ್ದು, ಸೋಮವಾರ ಜ್ವರ ಕಾಣಿಸಿಕೊಂಡಿತ್ತು. ಮಂಗಳವಾರ ತೀವ್ರ ಜ್ವರದ ಹಿನ್ನೆಲೆಯಲ್ಲಿ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
Geyser: ಗೀಸರ್ ಸ್ವಿಚ್ ಆಫ್ ಮಾಡಲು ಮರೆತು ಆಫೀಸ್ʼಗೆ ಹೋದರೆ ಏನಾಗುತ್ತದೆ ಗೊತ್ತಾ..?
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಬೆಳಗ್ಗೆ ಬಾಲಕಿ ಕೊನೆಯುಸಿರೆಳೆದಿದ್ದಾರೆ. ರಕ್ತದ ಮಾದರಿ ತಪಾಸಣೆ ಮಾಡಿದಾಗ ಶಂಕಿತ ಡೆಂಗ್ಯೂ ಪತ್ತೆಯಾಗಿದೆ. ಬಾಲಕಿಯು ಹೊನಗಾದ ಮರಾಠಾ ಮಂಡಳ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ಜಿಲ್ಲಾಸ್ಪತ್ರೆ ಆವರಣದಲ್ಲಿ ಮೃತ ಬಾಲಕಿಯ ತಂದೆ, ತಾಯಿ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.