ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಮನು ಭಾಕರ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಶನಿವಾರ ಫೈನಲ್ ಪ್ರವೇಶಿಸಿದ್ದ 22 ವರ್ಷ ವಯಸ್ಸಿನ ಮನು ಭಾಕರ್ ಮೂರನೇ ದಿನವಾದ ಭಾನುವಾರ ಅಂತಿಮ ಸುತ್ತಿನಲ್ಲಿ 3ನೇ ಸ್ಥಾನ ಪಡೆದುಕೊಂಡರು.
ಈ ಮೂಲಕ ಶೂಟಿಂಗ್ನಲ್ಲಿ ಭಾರತದ ಪರ ಪದಕ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾದರು. 2004ರಲ್ಲಿ ಅಥೆನ್ಸ್ನಲ್ಲಿ ನಡೆದ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಸುಮಾ ಶಿರೂರ್ ಕೊನೆಯ ಬಾರಿಗೆ ಫೈನಲ್ ತಲುಪಿದ್ದರು. ಇದು ಈವರೆಗಿನ ಸಾಧನೆಯಾಗಿತ್ತು.
ಬ್ಯಾಂಕ್ ಗ್ರಾಹಕರ ಗಮನಕ್ಕೆ: ಇಲ್ಲಿದೆ ನೋಡಿ ಆಗಸ್ಟ್ ತಿಂಗಳ` ಬ್ಯಾಂಕ್ ರಜೆ’ ದಿನಗಳ ಪಟ್ಟಿ
ಫೈನಲ್ನಲ್ಲಿ ದಕ್ಷಿಣ ಕೊರಿಯಾದ ಓಹ್ ಯೇ ಜಿನ್ 243.2, ಕಿಮ್ ಯೇಜಿ 241.3 ಅಂಕ ಪಡೆದರೆ, 22 ಶಾಟ್ ಗಳ ಬಳಿಕ ಮನು ಭಾಕರ್ 221.7 ಅಂಕ ಪಡೆದು ಮೂರನೇ ಸ್ಥಾನ ಪಡೆದರು. ಇದರೊಂದಿಗೆ ಶೂಟಿಂಗ್ ವಿಭಾಗದಲ್ಲಿ 12 ವರ್ಷಗಳ ಒಲಿಂಪಿಕ್ಸ್ ಪದಕದ ಬರವನ್ನು ನೀಗಿಸಿದರು. ಸದ್ಯ ಒಂದು ಕಂಚಿನ ಪದಕದೊಂದಿಗೆ ಪದಕ ಪಟ್ಟಿಯಲ್ಲಿ ಭಾರತ 17ನೇ ಸ್ಥಾನದಲ್ಲಿದೆ.