ಬೆಂಗಳೂರು :– ಮಾಧ್ಯಮದವರ ಜೊತೆ ಮಾತನಾಡುವಾಗಲೇ ದಿಢೀರ್ ಮೂಗಲ್ಲಿ ರಕ್ತಸ್ರಾವ ಆದ ಬಳಿಕ ಹೆಚ್ ಡಿ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದಿದ್ದಾರೆ.
ಬಳಿಕ ಮಾತನಾಡಿದ ಅವರು, ವಿಶ್ರಾಂತಿ ಪಡೆಯುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನನ್ನ ಆರೋಗ್ಯ ಸಂಪೂರ್ಣವಾಗಿ ಹದಗೆಟ್ಟಿಲ್ಲ. ಯಾರು ಆತಂಕ ಪಡುವ ಅಗತ್ಯವಿಲ್ಲ. ಭಗವಂತನ ಆಶೀರ್ವಾದ ಇದೆ. ಮೂರು ಬಾರಿ ಹೃದಯದ ವಾಲ್ ಬದಲಾವಣೆ ಆಗಿದೆ. ಇದಕ್ಕಾಗಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದೆ. ಒತ್ತಡ, ವಿಶ್ರಾಂತಿ ಪಡೆಯದೆ ಕೆಲಸ ಮಾಡಿದ್ದರಿಂದ ಈ ರೀತಿ ಆಗಿದೆ. ರಾಜ್ಯದ ಜನರಿಗೆ ಕೆಲಸ ಮಾಡಿಕೊಡಬೇಕು ಅಂತ ಓಡಾಡುತ್ತಿದ್ದೆ. ಒತ್ತಡವನ್ನ ಕಡಿಮೆ ಮಾಡಿಕೊಳ್ಳಿ ಅಂತ ವೈದ್ಯರ ಹೇಳಿದ್ದಾರೆ.