ಮಂಡ್ಯ:- ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆಯಾಗಿದ್ದು, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ಮಳೆ ಬರಲಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Bagalakote: ಪ್ರವಾಹ ಪಿಡಿತ ಗ್ರಾಮಗಳಿಗೆ ಪರಿಷತ್ ಸದಸ್ಯೆ ಉಮಾಶ್ರೀ ಭೇಟಿ!
ಜುಲೈ ತಿಂಗಳಿನಲ್ಲಿ ಪ್ರತಿ ದಿನ 1 ಟಿಎಂಸಿಯಂತೆ ತಮಿಳುನಾಡಿಗೆ 40 ಟಿಎಂಸಿ ನೀರು ಹರಿಸಬೇಕಿತ್ತು. ಅದಕ್ಕಿಂತ ಹೆಚ್ಚಿನ ನೀರು ಹರಿದು ತಾಯಿ ಕಾವೇರಿ ನೆಮ್ಮದಿ ಶಾಂತಿ ತಂದಿದ್ದಾಳೆ” ಎಂದು ಹೇಳಿದರು.
ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚಿನ ಪ್ರಯೋಜನವಿದೆ. ಸಂಕಷ್ಟ ಕಾಲದಲ್ಲಿ ಅವರ ಪಾಲಿನ 177 ಟಿಎಂಸಿ ನೀರನ್ನು ಅವರಿಗೆ ಹರಿಸಬಹುದು. ಸುಮಾರು 400 ಮೆ.ವ್ಯಾ ವಿದ್ಯುತ್ ತಯಾರಿಸಬಹುದು. ಈ ಅಣೆಕಟ್ಟು ಕಟ್ಟಲು ನ್ಯಾಯಾಲಯ ಅನುವು ಮಾಡಿಕೊಡುತ್ತದೆ ಎಂದು ನಂಬಿದ್ದೇವೆ. ತಮಿಳುನಾಡಿನ ಜನತೆಗೆ ಭಗವಂತನ ಕೃಪೆಯಿಂದ ಜ್ಞಾನೋದಯವಾಗುತ್ತದೆ. ನಮ್ಮ ಕಾಲದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಅನುವು ಮಾಡಿಕೊಡುತ್ತಾರೆ ಎಂದು ನಂಬಿದ್ದೇವೆ ಎಂದರು