ಬೆಂಗಳೂರು: ಸಿಲಿಕಾನ್ ಸಿಟಿಯಾದ್ಯಂತ ಫ್ಲೆಕ್ಸ್ ಮತ್ತು ಬ್ಯಾನರ್ ಬ್ಯಾನ್ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದರು. ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಜೊತೆ ಪೊಲೀಸ್ ಕಮಿಷನರ್ ಸಭೆ ನಡೆಸಲಾಗಿದ್ದು, ಸಭೆ ಬಳಿಕ ಮಾತನಾಡಿದ ಕಮಿಷನರ್, ‘ಫ್ಲೆಕ್ಸ್, ಬ್ಯಾನರ್ಗಳ ಅಳವಡಿಕೆ ವಿರುದ್ಧ ಯಾವ ರೀತಿ ಕಾರ್ಯಾಚರಣೆ ಮಾಡಬೇಕೆಂಬ ನಿರ್ಧಾರ ಮಾಡಲಾಗಿದೆ.
ಭಾರೀ ಮಳೆಯಿಂದಾಗಿ ಭೂ ಕುಸಿತ: ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ: HDK
ಇನ್ನು ಅನಧೀಕೃತ ಬ್ಯಾನರ್ಗಳ ತೆರವಿಗೆ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಯಿಂದ ಜಂಟಿ ಕಾರ್ಯಚರಣೆ ನಡೆಸಲಿದ್ದು, ಬ್ಯಾನರ್, ಫ್ಲೆಕ್ಸ್, ಹೋಲ್ಡಿಂಗ್ಸ್ಗಳನ್ನು ಪೊಲೀಸರು ತೆರೆವುಗೊಳಿಸಲಿದ್ದಾರೆ. ಬಿಬಿಎಂಪಿ ಅಧಿಕಾರಿಗಳು, ‘ಬ್ಯಾನರ್, ಫ್ಲೆಕ್ಸ್, ಹೋಲ್ಡಿಂಗ್ಸ್ ಬಗ್ಗೆ ಸ್ಥಳೀಯ ಠಾಣೆಗೆ ದೂರು ನೀಡಲಿದ್ದು, ದೂರು ಬಂದ ತಕ್ಷಣವೇ ಪೊಲೀಸರು, ಬ್ಯಾನರ್, ಫ್ಲೆಕ್ಸ್, ಹೋಲ್ಡಿಂಗ್ಸ್ ತೆರವು ಕಾರ್ಯ ನಡೆಸಲಿದ್ದಾರೆ.