ಬೆಂಗಳೂರು: ಮಳೆಯಿಂದಾಗಿ ಕರಾವಳಿ ಭಾಗದ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಮಧ್ಯ ಆಗಸ್ಟ್ 3ರ ವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ. ರಾಜ್ಯದ ಉತ್ತರ ಒಳನಾಡಿನಲ್ಲೂ ಭಾರಿ ಮಳೆಯಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರವರೆಗೆ ವ್ಯಾಪಕ ಮಳೆ ಸಾಧ್ಯತೆ ಇದೆ. ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಆಗಸ್ಟ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು, ನಾಳೆ ರೆಡ್ ಅಲರ್ಟ್. ಆ.1ರಂದು ಆರೆಂಜ್ ಅಲರ್ಟ್, ಆ.2 & 3ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜು.31, ಆಗಸ್ಟ್ 1ರಂದು ಆರೆಂಜ್ ಅಲರ್ಟ್, ಉತ್ತರ ಕನ್ನಡ ಜಿಲ್ಲೆಯಲ್ಲಿ ಆ.2, 3ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ವಿದೇಶ ಪ್ರಯಾಣಕ್ಕೆ ತೆರಿಗೆ ಪಾವತಿ ಪ್ರಮಾಣಪತ್ರ ಎಲ್ಲರಿಗೂ ಕಡ್ಡಾಯವಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿನಲ್ಲಿ ಇಂದು, ನಾಳೆ ರೆಡ್ ಅಲರ್ಟ್, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿನಲ್ಲಿ ಆ.1ರಂದು ಆರೆಂಜ್ ಅಲರ್ಟ್, ಬೆಳಗಾವಿ ಜಿಲ್ಲೆಯಲ್ಲಿ ಜು.30, 31, ಆಗಸ್ಟ್ 1, 2ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ರಾಜ್ಯಾದ್ಯಂತ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಬೆಂಗಳೂರಿನಲ್ಲಿ ಇಂದಿನಿಂದ ಆಗಸ್ಟ್ 3ರವರೆಗೆ ಹಗುರವಾದ ಮಳೆ ಸಾಧ್ಯತೆ ಇದೆ ಎಂದು ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.