ನವದೆಹಲಿ: ವಯನಾಡ್ ದುರಂತ ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಷಾದ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿ, ವಯನಾಡ್ ಇಂದು ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದು, ಇಲ್ಲಿನವರ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.
ಈ ದುರಂತ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಅಲ್ಲಿಯ ನಿವಾಸಿಗಳ ರಕ್ಷಣಾ ಕಾರ್ಯಕ್ಕೆ ಕೇಂದ್ರ ಅಗತ್ಯ ನೆರವು ಕಲ್ಪಿಸಲಿದೆ ಎಂದರು. ವಯನಾಡಿನಲ್ಲಿ ಜನಜೀವನವನ್ನು ಸಹಜ ಸ್ಥಿತಿಗೆ ತರುವಲ್ಲಿ ಕೇಂದ್ರ ಸಂಪೂರ್ಣ ಸಹಕಾರ, ಬೆಂಬಲ ನೀಡಲು ಬದ್ಧವಾಗಿದೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.