ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕ ಅಧಿಕಾರ ಇದೆ? ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಸ್ ಸಿ/ಎಸ್ ಟಿ ಕಲ್ಯಾಣದ ಬಗ್ಗೆ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಬೇಕೆಂದು ಕರೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೇ,
Banana: ಸಿಪ್ಪೆ ಮೇಲೆ ಕಪ್ಪು ಚುಕ್ಕೆಗಳಿರೋ ಬಾಳೆಹಣ್ಣು ತಿನ್ನಬಹುದಾ..? ಇಲ್ಲಿದೆ ಮಾಹಿತಿ
ನಿಮಗೆ ದಲಿತರ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯನ್ನು ಜಾರಿಗೆ ತಂದು ಕೇಂದ್ರ ಬಜೆಟ್ ನಲ್ಲಿ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಶೇಕಡಾ 25ರಷ್ಟು ಅನುದಾನವನ್ನು ಮೀಸಲಿಡಿ, ಆ ಮೇಲೆ ನಮ್ಮನ್ನು ಪ್ರಶ್ನೆ ಮಾಡಲು ಬನ್ನಿ. ಅಲ್ಲಿಯ ವರೆಗೆ ಮೌನವಾಗಿರುವುದು ನಿಮಗೆ ಕ್ಷೇಮ ಎಂದಿದ್ದಾರೆ.
ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ ರೂ.3,71,383 ಕೋಟಿ, ಅದರಲ್ಲಿ ರೂ.39,121 ಕೋಟಿಯನ್ನು ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ರೂ.48.21 ಲಕ್ಷ ಕೋಟಿಯಾಗಿದ್ದು ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ ರೂ.2,90,401 ಕೋಟಿ ಮಾತ್ರ ಎಂದು ವಿವರಿಸಿದ್ದಾರೆ.