ಕೇರಳದ ವೈನಾಡು ಭೂಕುಸಿತ ದುರಂತ ಹಿನ್ನೆಲೆಯಲ್ಲಿ ಕೇರಳಕ್ಕೆ ಪರಿಹಾರ ಕಾರ್ಯಚರಣೆಗಾಗಿ ತೆರಳುವ ವಾಹನಗಳಿಗೆ ಸುಗಮವಾಗಿ ಅನುಕೂಲ ಮಾಡಿಕೊಡುವ ದಿಸೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪ ನಾಗ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಮೊನಾ ರೋತ್ ಅವರು ಜಿಲ್ಲೆಯ ಕೇರಳ ಗಡಿ ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇರಳದಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಮುತ್ತಂಗ ಚೆಕ್ಪೋಸ್ಟ್ ಸಮೀಪದ ಹೆದ್ದಾರಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದ್ದ ಕಾರಣ ಪರಿಶೀಲಿಸಿದರು.
ಗುಂಡ್ಲುಪೇಟೆ-ಕೇರಳ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಸುಗಮವಾಗಿ ಪರಿಹಾರ ಕಾರ್ಯಚರಣೆಗೆ ತೆರಳುವ ವಾಹನಗಳಿಗೆ ಅವಕಾಶ ಮಾಡಿಕೊಡುವ ಸಂಬಂಧ ವ್ಯಾಪಕವಾಗಿ ಪರಿಶೀಲಿಸಿದರು.
ಗಡಿ ಭಾಗದ ಮೂಲೆಹೊಳೆ ಚೆಕ್ಪೋಸ್ಟ್ ಸೇರಿದಂತೆ ಕೇರಳಕ್ಕೆ ಹೊಂದಿಕೊಂಡ ಜಿಲ್ಲೆಯ ಗಡಿ ಪ್ರದೇಶಗಳಿಗೆ ಭೇಟಿ ನೀಡಿ ಸಂಚಾರ ವ್ಯವಸ್ಥೆಯನ್ನು ವೀಕ್ಷಿಸಿದರು.
ಇದೇ ವೇಳೆ ಅರಣ್ಯ ಇಲಾಖೆ, ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಯಿಂದ ಮಾಹಿತಿ ವಿವರ ಪಡೆದರು.ಗಡಿ ಭಾಗದಲ್ಲಿ ಕೈಗೊಳ್ಳಬೇಕಿರುವ ಹಾಗೂ ಅನುಸರಿಸಬೇಕಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ಸೂಕ್ತ ನಿರ್ದೇಶನ ನೀಡಿದರು.