ನವದೆಹಲಿ:- ಕರ್ನಾಟಕಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧವಾಗಿದೆ ಎಂದು ಪ್ರಲ್ಹಾದ್ ಜೋಶಿ ಘೋಷಣೆ ಮಾಡಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಹೇಳಿದ್ದಾರೆ.
ಮುಡಾ ಹಗರಣ: ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದಾರೆ, ರಾಜೀನಾಮೆ ನೀಡಲಿ; ಶೋಭಾ ಕರಂದ್ಲಾಜೆ!
ಈ ಹಿಂದೆ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸುತರಾಂ ಒಪ್ಪಿರಲಿಲ್ಲ. ಇರುವ ಸ್ಟಾಕನ್ನೆಲ್ಲ ರಾಜ್ಯಕ್ಕೆ ಮಾರಾಟ ಮಾಡಿ ಖಾಲಿ ಮಾಡಿದರೆ ತುರ್ತು ಸಂದರ್ಭಗಳಲ್ಲಿ ವಿತರಣೆ ಮಾಡಲು ಕಷ್ಟ ಎಂಬುದು ಕೇಂದ್ರದ ವಾದವಾಗಿತ್ತು
ಅಕ್ಕಿ ನೀಡುವಂತೆ ಕರ್ನಾಟಕ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿತ್ತು. ರಾಜ್ಯದಿಂದ ಸಚಿವ ಕೆಹೆಚ್ ಮುನಿಯಪ್ಪ ಖುದ್ದು ದೆಹಲಿಗೆ ಬೇಟಿ ಮಾಡಿ ಕೇಂದ್ರ ಸಚಿವರ ಜತೆ ಮಾತುಕತೆಯನ್ನೂ ನಡೆಸಿದ್ದರು. ಆದರೆ, ಪ್ರಯೋಜನವಾಗಿರಲಿಲ್ಲ. ನಂತರ ರಾಜ್ಯ ಸರ್ಕಾರದ ಪಾಲಿನ ಅಕ್ಕಿಯ ಬದಲು ಅದರ ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನೀಡಲು ಆರಂಭಿಸಲಾಗಿತ್ತು. ಇದೀಗ ಕೇಂದ್ರದಿಂದ ಅಕ್ಕಿ ದೊರೆತರೆ ರಾಜ್ಯ ಸರ್ಕಾರವು ಫಲಾನುಭವಿಗಳಿಗೆ ಅಕ್ಕಿಯನ್ನೇ ವಿತರಿಸಬಹುದಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಅಂದುಕೊಂಡಂತೆಯೇ ನಡೆಯಲಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು
ಮುಖ್ಯಮಂತ್ರಿಗಳ ವಿರುದ್ಧದ ತನಿಖೆ ವಿಚಾರವಾಗಿ ಕಾಂಗ್ರೆಸ್ ನಾಯಕರು, ಸಚಿವರಿಗೆ ಜೋಶಿ ತಿರುಗೇಟು ನೀಡಿದ್ದಾರೆ. ರಾಜ್ಯಪಾಲರ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ಹಕ್ಕಿಲ್ಲ. ಅವರು ಸಂವಿಧಾನದ ರಕ್ಷಕರು. ಗಂಭೀರ ಸ್ವರೂಪದ ಆರೋಪ ಬಂದಾಗ ತನಿಖೆಗೆ ಅನುಮತಿ ಕೊಡ್ತಾರೆ. ಕಾಂಗ್ರೆಸ್ ನಾಯಕರು ಯಾಕೆ ಭಯದಲ್ಲಿದ್ದಾರೆ? ಅವರೇನಾದ್ರು ನೇರವಾಗಿ ಜೈಲಿಗೆ ಹಾಕುತ್ತೇನೆ ಎಂದರೇ ಎಂದು ಅವರು ಪ್ರಶ್ನಿಸಿದರು.