ಉತ್ತರ ಕನ್ನಡ:- ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲೆಯ 9 ತಾಲೂಕುಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪೂರ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಮಳೆಯ ಅಬ್ಬರ ಜೋರಾಗುತ್ತಿದ್ದು, ನಾಳೆ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ನ್ನು ಹವಾಮಾನ ಇಲಾಖೆ ಘೋಷಿಸಿದೆ.