ಬೆಂಗಳೂರು:- ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ ಆಗಿದ್ದು, ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ
JDS-BJP ಪಾದಯಾತ್ರೆಗೆ ರಕ್ಷಣೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!
ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್ಎಸ್, ಹಾರಂಗಿ, ಹೇಮಾವತಿ, ಕಬಿನಿ, ಆಲಮಟ್ಟಿ, ತುಂಬೆ, ವಾರಾಹಿ ಹೀಗೆ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇನ್ನು ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಹೆಚ್ಚೇ ಇದೆ, ಇಂದಿನಿಂದ ಮತ್ತೆ 4 ದಿನಗಳ ಕಾಲ ಮುಂದುವರೆಯಲಿದೆ.
ಈ ಬಾರಿ ವೀಕೆಂಡ್ನಲ್ಲೂ ಎಡೆಬಿಡದೇ ಮಳೆ ಸುರಿಯುವ ಸಾಧ್ಯತೆ ಹೆಚ್ಚಾಗಿದೆ. ವಿಶೇಷವಾಗಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಈಗಾಗಲೇ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಹಲವೆಡೆ ಎಡಬಿಡದ ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ಗುಡ್ಡ ಕುಸಿತಗಳು ಸಂಭವದಿಂದ ರಸ್ತೆಗಳು ಬಂದ್ ಆಗಿವೆ. ಈ ನಡುವೆ ಇಂದಿನಿಂದ ಆಗಸ್ಟ್ 6 ರವರೆಗೆ ಮತ್ತೆ ಮಳೆ ಮುಂದುವರೆಯಲಿದೆ ಅನ್ನೋ ಮುನ್ಸೂಚನೆಯನ್ನು ಹವಾಮಾನ ತಜ್ಞರು ತಿಳಿಸಿದ್ದಾರೆ
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲೂ ಇದೇ ರೀತಿಯ ಮಳೆ ಮುಂದುವರೆಯಲಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 4ರ ವರೆಗೆ ಆರೆಂಜ್ ಹಾಗೂ 5 ಮತ್ತು 6 ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಭಾರಿಯಿಂದ ಅತಿ ಭಾರಿ ಮಳೆ ಹಿನ್ನಲೆ ಇಂದು ಆರೆಂಜ್ ಹಾಗೂ ಆಗಸ್ಟ್ 3 ಮತ್ತು4 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೊತೆಗೆ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇವತ್ತಿನಿಂದ ಆಗಸ್ಟ್ 6ರ ವರೆಗೆ ಹಲವೆಡೆ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. ಈ ಬಾರಿಯ ಜೂನ್ 1 ರಿಂದ ಜುಲೈ 31ರ ವರೆಗೆ ರಾಜ್ಯಾದ್ಯಂತ ಶೇಕಡಾ 29 ರಷ್ಟು ಹೆಚ್ಚುವರಿ ಮಳೆಯಾಗಿದೆ