ಹುಬ್ಬಳ್ಳಿ: ಸುಲಿಗೆಕೋರ ಅರುಣ ಊರ್ಫ ಸೋನು ನಾಯ್ಕ ವಿರುದ್ಧ 13 ಪ್ರಕರಣಗಳಿದ್ದವು. ಗ್ಯಾಂಗ್ ಕಟ್ಟಿಕೊಂಡು ಸುಲಿಗೆ ಮಾಡುತ್ತಿದ್ದ. ವೇಶ್ಯಾವಾಟಿಕೆ ಹೆಸರಲ್ಲಿ ದರೋಡೆ, ಸುಲಿಗೆ ಪ್ರಕರಣವೊಂದರಲ್ಲಿ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಆತನ ಮೇಲೆ ಫೈರಿಂಗ್ ಮಾಡಿ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದರು.
ರಾಜ್ಯಪಾಲರು ಮಾಡುತ್ತಿರುವುದು ತಪ್ಪು: ಹರಿಹಾಯ್ದ ಸಚಿವ ಜಿ ಪರಮೇಶ್ವರ್!
ನಗರದಲ್ಲಿಂದು ಪೊಲೀಸ್ ಫೈರಿಂಗ್ ನಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿ ಭೇಟಿಯಾಗಿ ಬಳಿಕ ಮಾತನಾಡಿದ ಅವರು, ಈತ ಆಟೋಚಾಲಕನಾಗಿದ್ದು ಪ್ಯಾಸೆಂಜರ್ಗಳೇ ಇವನ ಟಾರ್ಗೆಟ್ ಆಗಿದ್ದರು. ಅವರನ್ನು ಹೋಟೆಲ್ಗೆ ಕೆರೆದೊಯ್ಯುವ, ಮಹಿಳೆಯರನ್ನು ಸಪ್ಲೈ ಮಾಡುವ ಹಾಗೂ ನಂತರ ಕರೆದೊಯ್ದವರನ್ನು ಸುಲಿಗೆ ಮಾಡುತಿದ್ದರು. ಮೊನ್ನೆಯಷ್ಟೆ ಬಂಧಿತ ಅರುಣ ಮತ್ತು ಗ್ಯಾಂಗ್ (ಗೋಲ್ಡ್ ಸ್ಮಿತ್) ಅಲ್ಲಸಾಲಿಗ ಆಗಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಪ್ರಣವ್ ಎಂಬುವರನ್ನು ಆಟೋ ರಿಕ್ಷಾದಲ್ಲಿ ಹತ್ತಿಸಿಕೊಂಡು ಹೋಗಿ, ಬೆದರಿಸಿ ಚಿನ್ನಾಭರಣ, 10ಸಾವಿರ ನಗದು, ಮೊಬೈಲ್ ದೋಚಿದ್ದರು.
ಬಂಧಿತ ಅರುಣ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 13 ಪ್ರಕರಣ ದಾಖಲಾಗಿವೆ. ಆಟೋರಿಕ್ಷಾ, ಬೈಕ್ ಕಳ್ಳತನ ಎರಡು ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗಿತ್ತು. ಹೆಚ್ಚುವರಿ ತನಿಖೆಗೆಂದು ಎಂ.ಟಿ.ಎಸ್. ಕಾಲೋನಿಗೆ ಕರೆದೊಯ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ಉಪನಗರ ಠಾಣೆ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ ಆರೋಪಿ ಬಲಗಾಲಿಗೆ ಗುಂಡು ಹೊಡೆದಿದ್ದಾರೆ. ವ್ಯವಸ್ಥಿತವಾಗಿ ಸುಲಿಗೆ, ದರೋಡೆ ಕೃತ್ಯ ಮಾಡಲಾಗುತ್ತಿತ್ತು. ಹೋಟೆಲ್ನಲ್ಲಿ ವೇಶ್ಯಾವಾಟಿಕೆ ಕೃತ್ಯ ನಡೆಸುತ್ತಿದ್ದ ಮ್ಯಾನೇಜರ್ನನ್ನು ಬಂಧಿಸಲಾಗಿದೆ. ಈ ಗ್ಯಾಂಗ್ನಲ್ಲಿ ಮೂವರು ತಪ್ಪಿಸಿಕೊಂಡಿದ್ದಾರೆ. ಅವರ ಬಂಧನಕ್ಕೂ ಜಾಲ ಬೀಸಲಾಗಿದೆ ಎಂದು ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.
ನಟೋರಿಯಸ್ ದರೋಡೆಕೋರನ ಮೇಲೆ ಗುಂಡಿನ ದಾಳಿ:ಪೊಲೀಸರಿಗೆ ಗಾಯ ನಗರದ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫರ್ಹಾನ್ ಕಾಲಿಗೆ ಗುಂಡು ಹಾರಿಸಿದ ಘಟನೆ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಪೋಲಿಸರು ಮತ್ತೊಂದು ಪ್ರಕರಣದಲ್ಲಿ ನಟೋರಿಯಸ್ ದರೋಡೆಕೋರನ ಮೇಲೆ ಫೈರಿಂಗ್ ಮಾಡಿದ್ದಾರೆ.
ಹುಬ್ಬಳ್ಳಿಯ ಉಪನಗರ ಠಾಣೆಯ ಇನ್ ಸ್ಪೆಕ್ಟರ್ ಎಂ.ಎಸ್. ಹೂಗಾರ ಅವರೇ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದು, ಉಪನಗರ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚನ್ನಮ್ಮ ವೃತ್ತದ ಬಳಿ ಚೈನು, ಉಂಗುರು, ಫೋನ್ ಹಾಗೂ ಹಣ ದರೋಡೆ ಪ್ರಕರಣ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪನಗರ ಠಾಣೆಯ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡು ಆರೋಪಿ ಅರುಣ ನಾಯಕ್ ಎಂಬಾತನನ್ನು ಬಂಧಿಸಿದ್ದಾರೆ.
ಅದರಂತೆ ಹೆಚ್ಚಿನ ವಿಚಾರಣೆ ನಡೆಸಿದಾಗ ಮತ್ತೆ ಕೆಲವರು ಭಾಗಿಯಾಗಿರುವ ಮಾಹಿತಿ ನೀಡುತ್ತೇನೆಂದು ಎಂಟಿಎಸ್ ಕಾಲನಿಗೆ ಅರುಣ್ ಕರೆದುಕೊಂಡು ಹೋಗಿದ್ದಾನೆ.
ಈ ವೇಳೆ ಆರೋಪಿ ಅರುಣ್ ಪೊಲೀಸರ ಗಮನವನ್ನು ಬೇರೆಡೆ ಸೆಳೆದು ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟೇ ಅಲ್ಲದೇ ಪೊಲೀಸ್ ಪೇದೆಗಳಾದ ಡಿ.ಆರ್. ಪಮ್ಮಾರ, ತರುಣ ಗೂಡನ್ನವರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿ ಅರುಣ್ ನಾಯಕ್ ಕಾಲಿಗೆ ಇನ್ ಸ್ಪೆಕ್ಟರ್ ಎಂ.ಎಸ್.ಹೂಗಾರ ಗುಂಡು ಹಾರಿಸಿದ್ದಾರೆ. ಪರಿಣಾಮ ಆರೋಪಿ ಕಾಲಿಗೆ ಗಾಯವಾಗಿದ್ದು, ಆತನನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ
ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ