ಬೆಂಗಳೂರು:- ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್ಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜರುಗಿದೆ.
ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ಕೆ ಪಾಟೀಲ್ ಭೇಟಿ, ಪರಿಶೀಲನೆ!
ಘಟನೆ ನಂತರ ಕೆಲಕಾಲ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
35 ವರ್ಷದ ಯುವಕ ಸಂಜೆ 5:41ರ ಸುಮಾರಿಗೆ ಮೆಟ್ರೋ ಟ್ರ್ಯಾಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗಸಂದ್ರ- ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡ ಕಲ್ಲಸಂದ್ರ ನಿಲ್ದಾಣದಲ್ಲಿ ಘಟನೆ ನಡೆದಿದೆ. ಸ್ಥಳೀಯ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.